ಎಲ್ಪಿಜಿ ಸಿಲೆಂಡರ್ ಬೆಲೆ ಹೆಚ್ಚಳ, ಯುವ ಕಾಂಗ್ರೆಸ್ ಪ್ರತಿಭಟನೆ
ಬಳ್ಳಾರಿ, 13 ಮಾರ್ಚ್ (ಹಿ.ಸ.) ಆ್ಯಂಕರ್: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ನೆಪದಲ್ಲಿ ಕೇಂದ್ರ ಸರ್ಕಾರವು ಎಲ್ಪಿಜಿ ಸಿಲೆಂಡರ್ಗಳ ಬೆಲೆ ಹೆಚ್ಚಳ ಮಾಡಿ, ಕೃತಕ ಅಭಾವ ಸೃಷ್ಟಿಸುತ್ತಿರುವುದನ್ನು ಖಂಡಿಸಿ ಬಳ್ಳಾರಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ನಗರದಲ್ಲಿ ಶುಕ್ರವಾರ
ಎಲ್ಪಿಜಿ ಸಿಲೆಂಡರ್ ಬೆಲೆ ಹೆಚ್ಚಳ, ಯುವ ಕಾಂಗ್ರೆಸ್ ಪ್ರತಿಭಟನೆ


ಎಲ್ಪಿಜಿ ಸಿಲೆಂಡರ್ ಬೆಲೆ ಹೆಚ್ಚಳ, ಯುವ ಕಾಂಗ್ರೆಸ್ ಪ್ರತಿಭಟನೆ


ಎಲ್ಪಿಜಿ ಸಿಲೆಂಡರ್ ಬೆಲೆ ಹೆಚ್ಚಳ, ಯುವ ಕಾಂಗ್ರೆಸ್ ಪ್ರತಿಭಟನೆ


ಬಳ್ಳಾರಿ, 13 ಮಾರ್ಚ್ (ಹಿ.ಸ.)

ಆ್ಯಂಕರ್: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ನೆಪದಲ್ಲಿ ಕೇಂದ್ರ ಸರ್ಕಾರವು ಎಲ್ಪಿಜಿ ಸಿಲೆಂಡರ್ಗಳ ಬೆಲೆ ಹೆಚ್ಚಳ ಮಾಡಿ, ಕೃತಕ ಅಭಾವ ಸೃಷ್ಟಿಸುತ್ತಿರುವುದನ್ನು ಖಂಡಿಸಿ ಬಳ್ಳಾರಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಬಳ್ಳಾರಿ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರಾದ ಕೆ. ಶ್ರೀಕಾಂತ್ ಅವರ ನೇತೃತ್ವದಲ್ಲಿ ಗಡಿಗೆ ಚೆನ್ನಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿ ಯುವ ಕಾಂಗ್ರೆಸ್ ಸಮಿತಿಯ ರಾಮಾಂಜಿನಿ, ಕವಿತಾ, ಖಾದರ್ಭಾಷ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ವಿವೇಕ್. ಎಂ, ಗೋಪಾಲ ಸೇರಿ ಯುವ ಕಾಂಗ್ರೆಸ್ನ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande