
ನವದೆಹಲಿ, 13 ಮಾರ್ಚ್ (ಹಿ.ಸ.):
ಆ್ಯಂಕರ್:
ದಕ್ಷಿಣ ಅಮೆರಿಕದ ದೇಶವಾದ ಚಿಲಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡ ಜೋಸ್ ಆಂಟೋನಿಯೊ ಕಾಸ್ಟ್ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಸಂದೇಶ ಹಂಚಿಕೊಂಡ ಪ್ರಧಾನಿ ಮೋದಿ, ಭಾರತ ಮತ್ತು ಚಿಲಿ ದೇಶಗಳ ನಡುವಿನ ಆತ್ಮೀಯ ಹಾಗೂ ಸ್ನೇಹಪರ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು ಚಿಲಿಯೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ವ್ಯಾಪಾರ, ತಂತ್ರಜ್ಞಾನ ಹಾಗೂ ಇಂಧನ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಭಾರತ ಮತ್ತು ಚಿಲಿ ದೇಶಗಳ ನಡುವೆ ಸಹಕಾರ ವಿಸ್ತರಿಸಲು ಹೆಚ್ಚಿನ ಅವಕಾಶಗಳಿವೆ ಎಂದು ಅವರು ಹೇಳಿದ್ದಾರೆ.
ಇದಲ್ಲದೆ, ಜೋಸ್ ಆಂಟೋನಿಯೊ ಕಾಸ್ಟ್ ಅವರ ಅಧ್ಯಕ್ಷೀಯ ಅವಧಿ ಯಶಸ್ವಿ ಹಾಗೂ ಫಲಪ್ರದವಾಗಲಿ ಎಂದು ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa