ಮಾ.18 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇದಾಜ್ಞೆ ಜಾರಿ
ಕೊಪ್ಪಳ, 13 ಮಾರ್ಚ್ (ಹಿ.ಸ.): ಆ್ಯಂಕರ್ : ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18 ರಿಂದ ಎಪ್ರಿಲ್ 2 ರವರೆಗೆ ಕೊಪ್ಪಳ ಜಿಲ್ಲೆಯಾದ್ಯಂತ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ
ಮಾ.18 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇದಾಜ್ಞೆ ಜಾರಿ


ಕೊಪ್ಪಳ, 13 ಮಾರ್ಚ್ (ಹಿ.ಸ.):

ಆ್ಯಂಕರ್ : ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18 ರಿಂದ ಎಪ್ರಿಲ್ 2 ರವರೆಗೆ ಕೊಪ್ಪಳ ಜಿಲ್ಲೆಯಾದ್ಯಂತ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ.ಸುರೇಶ್ ಬಿ. ಇಟ್ನಾಳ್ ಅವರು ಆದೇಶ ಹೊರಡಿಸಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-1 ರ ಪರೀಕ್ಷೆಗಳು ಮಾರ್ಚ್ 18 ರಿಂದ ಎಪ್ರಿಲ್ 2 ರವರೆಗೆ ಬೆಳಿಗ್ಗೆ 10 ಗಂಟೆ ಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೊಪ್ಪಳ ಜಿಲ್ಲೆಯ ಒಟ್ಟು 74 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆಗಳನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಂತರದ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕೊಪ್ಪಳ ತಾಲ್ಲೂಕಿ 21, ಗಂಗಾವತಿ ತಾಲ್ಲೂಕಿನ 14, ಕುಷ್ಟಗಿ ತಾಲ್ಲೂಕಿನ 15, ಯಲಬುರ್ಗಾ ತಾಲ್ಲೂಕಿನ 7, ಕುಕನೂರು ತಾಲ್ಲೂಕಿನ 8, ಕಾರಟಗಿ ತಾಲ್ಲೂಕಿನ 5 ಹಾಗೂ ಕನಕಗಿರಿ ತಾಲ್ಲೂಕಿನ 4 ಪರೀಕ್ಷಾ ಕೇಂದ್ರಗಳು ಸೇರಿದಂತೆ ಜಿಲ್ಲೆಯ ಒಟ್ಟು 74 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ನಿಷೇಧಾಜ್ಞೆ ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ. ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande