ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗಳಿಗೆ ಮುಂಬಡ್ತಿ ಪತ್ರ ವಿತರಣೆ
ವಿಜಯಪುರ, 13 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ಮುಂಬಡ್ತಿ ನೀಡುವ ಕಾರ್ಯಕ್ರಮ ಇಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು. ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪೊಲೀಸ್ ಕಾನ್ಸ್ಟೇಬ
Constable promotion


ವಿಜಯಪುರ, 13 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ಮುಂಬಡ್ತಿ ನೀಡುವ ಕಾರ್ಯಕ್ರಮ ಇಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು.

ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯಿಂದ ಹೆಡ್ ಕಾನ್ಸ್ಟೇಬಲ್ ಹುದ್ದೆಗೆ ಹಾಗೂ ಹೆಡ್ ಕಾನ್ಸ್ಟೇಬಲ್ ಹುದ್ದೆಯಿಂದ ಎ.ಎಸ್.ಐ. (ಸಹಾಯಕ ಉಪನಿರೀಕ್ಷಕ) ಹುದ್ದೆಗೆ ಬಡ್ತಿ ಹೊಂದಿದ ಸಿಬ್ಬಂದಿಗೆ ಮುಂಬಡ್ತಿ ಪತ್ರಗಳನ್ನು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ವಿತರಿಸಿದರು.

ಒಟ್ಟು 20 ಮಂದಿ ಪೊಲೀಸ್ ಸಿಬ್ಬಂದಿ ಈ ಸಂದರ್ಭದಲ್ಲಿ ಮುಂಬಡ್ತಿ ಪಡೆದರು. ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಿದ ಹಿನ್ನೆಲೆ ಇವರಿಗೆ ಈ ಗೌರವ ಲಭಿಸಿದ್ದು, ಇಲಾಖೆಯ ಹಿರಿಯ ಅಧಿಕಾರಿಗಳು ಮುಂಬಡ್ತಿ ಪತ್ರಗಳನ್ನು ನೀಡಿ ಎಸ್ಪಿ ಅಭಿನಂದಿಸಿದರು.

ಈ ವೇಳೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ನಿಂಬರಗಿ, ಮುಂಬಡ್ತಿ ಪಡೆದ ಸಿಬ್ಬಂದಿ ಇನ್ನಷ್ಟು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸಬೇಕು ಎಂದು ಸೂಚಿಸಿದರು. ಪೊಲೀಸ್ ಇಲಾಖೆಯಲ್ಲಿ ಶಿಸ್ತು, ಪ್ರಾಮಾಣಿಕತೆ ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಸಂಬಂಧ ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು. ಮುಂಬಡ್ತಿ ಪಡೆದ ಸಿಬ್ಬಂದಿಯನ್ನು ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳು ಅಭಿನಂದಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande