ಬಿಜೆಪಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು
ಬಾಗಲಕೋಟೆ, 14 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಹಾಗೂ ಶಿವಾಜಿ ಮಹಾರಾಜರ ಮೂರ್ತಿ ಸ್ಥಾಪನೆಗೆ 40 ಲಕ್ಷ ರೂ. ಮಂಜೂರು ಮಾಡಿರುವುದು ಉಪಚುನಾವಣೆಯ ಗಿಮಿಕ್ ಎಂದು ಬಿಜೆಪಿ ಆರೋಪಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಬಾಗಲಕೋಟೆಯಲ್ಲಿ ಮ
Cm


ಬಾಗಲಕೋಟೆ, 14 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಹಾಗೂ ಶಿವಾಜಿ ಮಹಾರಾಜರ ಮೂರ್ತಿ ಸ್ಥಾಪನೆಗೆ 40 ಲಕ್ಷ ರೂ. ಮಂಜೂರು ಮಾಡಿರುವುದು ಉಪಚುನಾವಣೆಯ ಗಿಮಿಕ್ ಎಂದು ಬಿಜೆಪಿ ಆರೋಪಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ಶಂಕುಸ್ಥಾಪನೆಗೂ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿದ್ದಾಗ ಮೆಡಿಕಲ್ ಕಾಲೇಜು ಮಂಜೂರು ಮಾಡದವರು ಈಗ ಆರೋಪ ಮಾಡುತ್ತಿರುವುದು ಅರ್ಥಹೀನ ಎಂದು ಹೇಳಿದರು. ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಬಿಜೆಪಿ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಲೇವಡಿ ಮಾಡಿದರು.

ಮೆಡಿಕಲ್ ಕಾಲೇಜು ಸ್ಥಾಪನೆಗೆ ಈ ಹಿಂದೆಯೇ ಟೆಂಡರ್ ಕರೆಯಲಾಗಿದೆ. ಅದಕ್ಕೆ ಏಜೆನ್ಸಿಯೂ ನಿಗದಿಯಾಗಿದೆ. ಈಗ ಕೆಲಸ ಪ್ರಾರಂಭವಾಗಬೇಕಷ್ಟೇ ಉಳಿದಿದ್ದು, ಅದಕ್ಕಾಗಿ ಇಂದು ಶಂಕುಸ್ಥಾಪನೆ ಮಾಡಲಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಮುಂಬರುವ ಉಪಚುನಾವಣೆಯ ಕುರಿತು ಮಾತನಾಡಿದ ಅವರು, ಅಭ್ಯರ್ಥಿಯನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು. ಆಕಾಂಕ್ಷಿಗಳ ಪಟ್ಟಿಯಲ್ಲಿ ಹೆಚ್.ವೈ. ಮೇಟಿ ಅವರ ಕುಟುಂಬದ ಸದಸ್ಯರೂ ಬಲಿಷ್ಠ ಅಭ್ಯರ್ಥಿಗಳಾಗಿದ್ದಾರೆ ಎಂದು ಹೇಳಿದರು. ಈ ವಾರದಲ್ಲೇ ಉಪಚುನಾವಣೆಯ ದಿನಾಂಕ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ನಾನು ಆಕಾಂಕ್ಷಿ ಎಂದು ಹೇಳಿಕೊಳ್ಳುವುದು ತಪ್ಪಲ್ಲ. ಆದರೆ ಎಲ್ಲ ಆಯಾಮಗಳಲ್ಲಿ ಪರಿಶೀಲನೆ ನಡೆಸಿ ಸೂಕ್ತ ಅಭ್ಯರ್ಥಿಯನ್ನು ಹೈಕಮಾಂಡ್ಗೆ ಶಿಫಾರಸು ಮಾಡಲಾಗುತ್ತದೆ. ನಂತರ ಹೈಕಮಾಂಡ್ ಒಬ್ಬರಿಗೆ ಟಿಕೆಟ್ ನೀಡಲಿದೆ ಎಂದು ಸಿಎಂ ಹೇಳಿದರು. ಉಪಚುನಾವಣೆಗೆ ನಾವು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

ಇದೇ ವೇಳೆ ಎಲ್ಪಿಜಿ ವಿತರಣೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಸಿಎಂ ಕಿಡಿಕಾರಿದರು. ಸಿಲಿಂಡರ್ ವಿತರಣೆ ಮಾಡುವ ಜವಾಬ್ದಾರಿ ಕೇಂದ್ರ ಸರ್ಕಾರದದ್ದಾಗಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸಲು ಅವರು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಸಿಲಿಂಡರ್ ಕೊರತೆ ಕುರಿತು ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದೆ. ಆಹಾರ ಖಾತೆ ಸಚಿವರು ಹಾಗೂ ನಾನು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಆದರೂ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಹೇಳಿದರು.

ಇನ್ನು ಒಳಮಿಸಲಾತಿ ಗೊಂದಲ ನಿವಾರಣೆಗೆ ಇದೇ ತಿಂಗಳ 27ರಂದು ಸಭೆ ಕರೆದಿದ್ದೇನೆ. ಸಭೆಯಲ್ಲಿ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande