ಸಮಾಜದಲ್ಲಿ ಸಮಾನತೆ, ಸೌಹಾರ್ದದ ಸಂದೇಶವನ್ನು ನೆನಪಿಸಿಕೊಳ್ಳೋಣ: ದತ್ತಾತ್ರೇಯ ಹೊಸಬಾಳೆ
ನವದೆಹಲಿ, 14 ಮಾರ್ಚ್ (ಹಿ.ಸ.): ಆ್ಯಂಕರ್: ಸಂತ ಶಿರೋಮಣಿ ಸದ್ಗುರು ಗುರು ರವಿದಾಸ್ ಅವರ 650ನೇ ಜನ್ಮ ಜಯಂತಿ ವರ್ಷ ಸಮಾಜದಲ್ಲಿ ಸಮಾನತೆ, ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳನ್ನು ಪುನಃ ನೆನಪಿಸಿಕೊಳ್ಳುವ ಅವಕಾಶವಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಸರ್ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ತಿಳಿಸಿದ
ಗುರು ರವಿದಾಸ ಚಿತ್ರ


ನವದೆಹಲಿ, 14 ಮಾರ್ಚ್ (ಹಿ.ಸ.):

ಆ್ಯಂಕರ್:

ಸಂತ ಶಿರೋಮಣಿ ಸದ್ಗುರು ಗುರು ರವಿದಾಸ್ ಅವರ 650ನೇ ಜನ್ಮ ಜಯಂತಿ ವರ್ಷ ಸಮಾಜದಲ್ಲಿ ಸಮಾನತೆ, ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳನ್ನು ಪುನಃ ನೆನಪಿಸಿಕೊಳ್ಳುವ ಅವಕಾಶವಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಸರ್ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಭಾರತದ ಸಂತ ಪರಂಪರೆ ಆಧ್ಯಾತ್ಮಿಕತೆ ಮತ್ತು ಭಕ್ತಿಯ ಮೂಲಕ ಸಮಾಜದಲ್ಲಿ ಏಕತೆ ಹಾಗೂ ಸಹಬಾಳ್ವೆಯ ಸಂದೇಶವನ್ನು ಹರಡಿದೆ ಎಂದು ಹೇಳಿದ್ದಾರೆ. ಸಮಾಜದಲ್ಲಿ ಬೆಳೆದುಬಂದ ಅಸಮಾನತೆ, ಜಾತಿಭೇದ ಹಾಗೂ ಅನೇಕ ಸಾಮಾಜಿಕ ಕೆಡುಕುಗಳ ವಿರುದ್ಧ ಸಂತರು ಸದಾ ಧ್ವನಿಯೆತ್ತಿ ಸಮಾನತೆಯ ಮೌಲ್ಯಗಳನ್ನು ಸಾರಿದ್ದಾರೆ ಎಂದು ತಿಳಿಸಿದ್ದಾರೆ.

ಸಂತ ರವಿದಾಸ್ ಅವರ ಜೀವನ ಹಾಗೂ ಉಪದೇಶಗಳು ಮಾನವೀಯತೆ, ಸಮಾನತೆ ಮತ್ತು ಸಹೋದರತ್ವದ ಮೌಲ್ಯಗಳನ್ನು ಬಲಪಡಿಸುವುದರಲ್ಲಿ ಮಹತ್ವದ ಪಾತ್ರ ವಹಿಸಿವೆ. ಅವರ ಸಂದೇಶ ಇಂದಿಗೂ ಸಮಾಜಕ್ಕೆ ಪ್ರೇರಣೆಯಾಗಿದ್ದು, ಎಲ್ಲ ವರ್ಗದ ಜನರು ಒಗ್ಗಟ್ಟಿನಿಂದ ಬದುಕುವ ದಿಕ್ಕಿನಲ್ಲಿ ಮಾರ್ಗದರ್ಶನ ನೀಡುತ್ತದೆ ಎಂದು ಹೇಳಿದ್ದಾರೆ.

ಗುರು ರವಿದಾಸ್ ಅವರ 650ನೇ ಜಯಂತಿ ವರ್ಷವು ಸಮಾಜದಲ್ಲಿ ಸೌಹಾರ್ದತೆ, ಸಹಬಾಳ್ವೆ ಮತ್ತು ಸಮಾನತೆಯ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸಲು ಅವಕಾಶ ಒದಗಿಸುತ್ತದೆ. ಈ ಸಂದರ್ಭದಲ್ಲಿ ಅವರ ಜೀವನದ ಆದರ್ಶಗಳನ್ನು ಅನುಸರಿಸಿ ಸಮಾಜದಲ್ಲಿ ಏಕತೆ ಹಾಗೂ ಸಹೋದರತ್ವವನ್ನು ಬೆಳೆಸುವತ್ತ ಎಲ್ಲರೂ ಪ್ರಯತ್ನಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande