ಆಹಾರ ವಾಹಿನಿ ಯೋಜನೆ : ಅರ್ಜಿ ಅವಧಿ ವಿಸ್ತರಣೆ
ಶಿವಮೊಗ್ಗ, 15 ಮಾರ್ಚ್ (ಹಿ.ಸ.); ಆ್ಯಂಕರ್: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2025-26 ನೇ ಸಾಲಿನಲ್ಲಿ ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಮಾರ್ಚ್ 20 ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಮಾರ್ಚ್ 04
ಆಹಾರ ವಾಹಿನಿ ಯೋಜನೆ : ಅರ್ಜಿ ಅವಧಿ ವಿಸ್ತರಣೆ


ಶಿವಮೊಗ್ಗ, 15 ಮಾರ್ಚ್ (ಹಿ.ಸ.);

ಆ್ಯಂಕರ್:

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2025-26 ನೇ ಸಾಲಿನಲ್ಲಿ ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಮಾರ್ಚ್ 20 ರವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ಅರ್ಜಿ ಸಲ್ಲಿಸಲು ಮಾರ್ಚ್ 04 ಕೊನೆಯ ದಿನಾಂಕವೆಂದು ನಿಗದಿಪಡಿಸಲಾಗಿತ್ತು. ಆಹಾರ ಯೋಜನೆ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕುಗಳು/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿರುತ್ತದೆ.

ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ. ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮುಖಾಂತರ ಸಲ್ಲಿಸಬಹುದು ಎಂದು ಡಿಬಿಸಿಡಿಸಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande