
ಬಾಗಲಕೋಟೆ, 15 ಮಾರ್ಚ್ (ಹಿ.ಸ.)
ಆ್ಯಂಕರ್ : ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ.
ಇಂದು ಚುನಾವಣಾ ಆಯೋಗ ಪತ್ರಿಕಾಗೋಷ್ಠಿಯಲ್ಲಿ
ಏಪ್ರಿಲ್ 9 ರಂದು ಮತದಾನ ನಡೆಯಲಿದ್ದು, ಮೇ 4 ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಮೇಟಿ ಕುಟುಂಬದೊಳಗಿನ ಟಿಕೆಟ್ ಸ್ಪರ್ಧೆ ಈಗಾಗಲೇ ಚರ್ಚೆಗೆ ಗ್ರಾಸವಾಗಿದೆ. ಅಭ್ಯರ್ಥಿ ಆಯ್ಕೆ ಕುರಿತು ಪಕ್ಷದ ಉನ್ನತ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಬೇಕಿದ್ದು, ಕಾರ್ಯಕರ್ತರು ಹಾಗೂ ಮುಖಂಡರು ತೀವ್ರ ಲಾಬಿ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಒಳಾಂಗಣದಲ್ಲಿ ‘ದೋಸ್ತಿ’ ಪೈಪೋಟಿಯೂ ತಾರಕಕ್ಕೇರಿರುವುದಾಗಿ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ಬಿಜೆಪಿ ಪಾಳಯದಲ್ಲೂ ಟಿಕೆಟ್ ಹಂಚಿಕೆ ಕುರಿತಂತೆ ತೀವ್ರ ಚರ್ಚೆಗಳು ನಡೆಯುತ್ತಿದ್ದು, ಗೆಲುವಿನ ಅಭ್ಯರ್ಥಿಯನ್ನು ಕಣಕ್ಕಿಳಿಸುವತ್ತ ಪಕ್ಷದ ನಾಯಕರು ತಂತ್ರ ರೂಪಿಸುತ್ತಿದ್ದಾರೆ.
ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ಘೋಷಣೆ ಬಳಿಕ ಚುನಾವಣಾ ರಣಕಹಳೆ ಇನ್ನಷ್ಟು ಜೋರಾಗುವ ಸಾಧ್ಯತೆ ಇದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande