
ಶಿವಮೊಗ್ಗ, 15 ಮಾರ್ಚ್ (ಹಿ.ಸ.):
ಆ್ಯಂಕರ್:
ಶಿವಮೊಗ್ಗ -ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ತನ್ನ ವ್ಯಾಪ್ತಿಯಲ್ಲಿರುವ ಖಾಸಗಿ ಬಡಾವಣೆಗಳಲ್ಲಿ ಲಭ್ಯವಿರುವ ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ನಿಯಮದನ್ವಯ ಅರ್ಹ ನೊಂದಾಯಿತ ಸಂಘ ಸಂಸ್ಥೆಗಳು/ ಕೇಂದ್ರ/ ರಾಜ್ಯ/ ಅರೆಸರ್ಕಾರಿ/ ನಿಗಮ ಮಂಡಳಿಗಳಿಂದ ಹಂಚಿಕೆಗಾಗಿ ಅರ್ಜಿ ನಮೂನೆ -1 ಮತ್ತು ನಮುನೆ -2 ನ್ನು ಪಡೆಯಲು ಏ.03 ಹಾಗೂ ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಏ.10ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್ ಹಾಗೂ ಕಚೇರಿ ದೂ.ಸಂ.: 08182-249867 ನ್ನು ಸಂಪರ್ಕಿಸುವುದು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa