
ಬೀದರ್, 15 ಮಾರ್ಚ್ (ಹಿ.ಸ.):
ಆ್ಯಂಕರ್:
ಪವಿತ್ರ ರಂಜಾನ್ ಮಾಸದ ಅಂಗವಾಗಿ ಬೀದರ ನಗರದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ ಖಾನ್ ಅವರಿಂದ ಆಯೋಜಿಸಲಾದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಅರಣ್ಯ, ಪರಿಸರ ಹಾಗೂ ಜೀವ ವೈವಿಧ್ಯ ಸಚಿವ ಈಶ್ವರ ಖಂಡ್ರೆ ಭಾಗವಹಿಸಿದರು.
ಈ ಸಂದರ್ಭದಲ್ಲಿ ವಿವಿಧ ಸಮುದಾಯಗಳ ಗಣ್ಯರು ಒಂದೇ ವೇದಿಕೆಯಲ್ಲಿ ಸೇರಿ ಸಹೋದರತ್ವ, ಸೌಹಾರ್ದತೆ ಹಾಗೂ ಐಕ್ಯತೆಯ ಸಂದೇಶವನ್ನು ಹಂಚಿಕೊಂಡರು. ಇಫ್ತಾರ್ ಕೂಟವು ಸಮಾಜದಲ್ಲಿ ಪರಸ್ಪರ ಗೌರವ ಮತ್ತು ಸಹಬಾಳ್ವೆಯನ್ನು ಬಲಪಡಿಸುವ ವೇದಿಕೆಯಾಗಿ ಪರಿಣಮಿಸಿತು.
ಈ ವೇಳೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ ಅವರು, ಪವಿತ್ರ ರಂಜಾನ್ ಮಾಸವು ಸಹನೆ, ದಾನಧರ್ಮ ಹಾಗೂ ಆತ್ಮಶುದ್ಧಿಯ ಮಹತ್ವವನ್ನು ಸಾರುವ ಪವಿತ್ರ ಕಾಲವಾಗಿದ್ದು, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಬಲಪಡಿಸುತ್ತದೆ ಎಂದು ಹೇಳಿದರು.
ಪವಿತ್ರ ರಂಜಾನ್ ಮಾಸವು ಎಲ್ಲರ ಜೀವನದಲ್ಲಿ ಶಾಂತಿ, ಸಮೃದ್ಧಿ ಮತ್ತು ಸುಖವನ್ನು ತರಲಿ ಎಂದು ಅವರು ಹಾರೈಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa