
ಬಾಗಲಕೋಟೆ, 15 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ರಬಕವಿ–ಬನಹಟ್ಟಿ ಮತಕ್ಷೇತ್ರದ ಬನಹಟ್ಟಿ ನಗರದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಬಕವಿ–ಬನಹಟ್ಟಿ ಘಟಕ ಹಾಗೂ ಸರಕಾರಿ ನೌಕರರ ಸಹಕಾರಿ ಸಂಘದ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಮುಖ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಶಾಸಕ ಸಿದ್ದು ಸವದಿ ಮಹಿಳೆಯರು ಸಮಾಜದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಹೇಳಿದರು.
ಕುಟುಂಬ, ಶಿಕ್ಷಣ, ಸಮಾಜ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಸಾಧನೆ ಮಾಡುತ್ತಿದ್ದು, ಅವರ ಶಕ್ತಿಕರಣಕ್ಕೆ ಸಮಾಜದ ಎಲ್ಲರೂ ಕೈಜೋಡಿಸಬೇಕು ಎಂದು ಅಭಿಪ್ರಾಯಪಟ್ಟರು.
ಮಹಿಳೆಯರಿಗೆ ಸಮಾನ ಅವಕಾಶಗಳು ದೊರಕಬೇಕು, ಅವರ ಹಕ್ಕುಗಳನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತಿವೆ ಎಂದು ತಿಳಿಸಿದರು. ಮಹಿಳೆಯರ ಸಬಲೀಕರಣದ ಮೂಲಕ ಸಮಾಜದಲ್ಲಿ ಉತ್ತಮ ಬದಲಾವಣೆ ಸಾಧ್ಯವೆಂದು ಹೇಳಿದರು.
ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳು, ಸರಕಾರಿ ನೌಕರರ ಸಹಕಾರಿ ಸಂಘದ ಸದಸ್ಯರು, ಶಿಕ್ಷಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande