ಅಂತರ್ ವಿದ್ಯಾಲಯಗಳ ಖೋ-ಖೋ ಪಂದ್ಯಾವಳಿ: ವಿಜೇತರಿಗೆ ಪಾರಿತೋಷಕ ವಿತರಣೆ
ವಿಜಯಪುರ, 15 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯ ಹಾಗೂ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ಅಂತರ ಮಹಾವಿದ್ಯಾಲಯಗಳ ಖೋ-ಖೋ ಪಂದ್ಯಾವಳಿಯ ಪಾರಿತೋಷಕ ವಿತರಣಾ ಸಮಾರಂಭವು ನಡೆಯಿತು. ಕಾರ್ಯಕ
ಕೊಕೊ


ವಿಜಯಪುರ, 15 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯ ಹಾಗೂ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ಅಂತರ ಮಹಾವಿದ್ಯಾಲಯಗಳ ಖೋ-ಖೋ ಪಂದ್ಯಾವಳಿಯ ಪಾರಿತೋಷಕ ವಿತರಣಾ ಸಮಾರಂಭವು ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಾಸಕ ಅಶೋಕ್ ಮನಗುಳಿ, ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ತಂಡಗಳಿಗೆ ಪಾರಿತೋಷಕಗಳನ್ನು ವಿತರಿಸಿ ಮಾತನಾಡಿದರು.

ವಿದ್ಯಾರ್ಥಿನಿಯರು ಕ್ರೀಡಾಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಬೇಕು ಎಂದು ಪ್ರೋತ್ಸಾಹಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಪರಮ ಪೂಜ್ಯ ಡಾ|| ಪ್ರಭುದೇವ ಸಾರಂಗದೇವ ಶಿವಾಚಾರ್ಯರು, ಸಂಸ್ಥೆಯ ನಿರ್ದೇಶಕರು, ಮಹಾವಿದ್ಯಾಲಯದ ಪ್ರಾಂಶುಪಾಲರು, ಕ್ರೀಡಾಕೂಟದ ಆಯೋಜಕರು, ಕ್ರೀಡಾ ಪ್ರೇಮಿಗಳು ಹಾಗೂ ವಿವಿಧ ಮಹಾವಿದ್ಯಾಲಯಗಳಿಂದ ಆಗಮಿಸಿದ ಸ್ಪರ್ಧಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande