
ವಿಜಯಪುರ, 15 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅವರು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಕಲುಷ’ ಕನ್ನಡ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರು.
ಉತ್ತರ ಕರ್ನಾಟಕದ ಹಲವು ಕಲಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿರುವ ಈ ಚಿತ್ರ ಈಗಾಗಲೇ ಸಿನಿ ವಲಯದಲ್ಲಿ ಸಾಕಷ್ಟು ಕುತೂಹಲ ಹಾಗೂ ಗಮನ ಸೆಳೆಯುತ್ತಿದೆ. ವಿಜಯಪುರ ಮೂಲದ ನಿರ್ದೇಶಕರಾದ ಶಣ್ಮುಖ ಅವರು ಚಿತ್ರವನ್ನು ನಿರ್ದೇಶಿಸಿದ್ದು, ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ನೀಡಿರುವುದು ವಿಶೇಷವಾಗಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಚಿತ್ರದಲ್ಲಿ ಯುವ ಪ್ರತಾಪ್, ಕೆ ಎಸ್ ಶ್ರೀಧರ್, ಬಾಲ ರಾಜ್ವಾಡಿ, ಐಶ್ವರ್ಯ ಸೇರಿದಂತೆ ಅನೇಕ ಪ್ರತಿಭಾವಂತ ಕಲಾವಿದರು ಅಭಿನಯಿಸಿದ್ದಾರೆ.
ಪೋಸ್ಟರ್ ಬಿಡುಗಡೆ ವೇಳೆ ಮಾತನಾಡಿದ ಸಚಿವ ಎಂ ಬಿ ಪಾಟೀಲ್, ಉತ್ತರ ಕರ್ನಾಟಕದ ಪ್ರತಿಭೆಗಳಿಂದ ಮೂಡಿ ಬರುತ್ತಿರುವ ಈ ಚಿತ್ರವು ಯಶಸ್ಸು ಕಾಣಲಿ ಹಾಗೂ ಪ್ರೇಕ್ಷಕರ ಮನ ಗೆಲ್ಲಲಿ ಎಂದು ಶುಭ ಹಾರೈಸಿದರು.
ಹೊಸತನದ ಕಥಾಹಂದರ ಮತ್ತು ಕಲಾವಿದರ ಪರಿಶ್ರಮದಿಂದ ಚಿತ್ರ ಉತ್ತಮ ಯಶಸ್ಸು ಸಾಧಿಸಲಿದೆ ಎಂಬ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಡಾ ಪ್ರವೀಣ್ ಚೌರ್, ಆನಂದಜಾದವ್, ರಾಮನಗೌಡ ಬಿರಾದಾರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಉತ್ತರ ಕರ್ನಾಟಕದ ಕಲಾವಿದರ ಪ್ರತಿಭೆಯಿಂದ ಮೂಡಿ ಬರುತ್ತಿರುವ ‘ಕಲುಷ’ ಸಿನಿಮಾ ರಾಜ್ಯದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಲಿ ಎಂಬ ಆಶಯ ಕಾರ್ಯಕ್ರಮದಲ್ಲಿ ವ್ಯಕ್ತಪಡಿಸಲಾಯಿತು
---------------
ಹಿಂದೂಸ್ತಾನ್ ಸಮಾಚಾರ್ / jyothi deshpande