ಎಲ್ ಪಿ ಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ:ಮುಖ್ಯಮಂತ್ರಿ
ಬೆಂಗಳೂರು, 15 ಮಾರ್ಚ್ (ಹಿ.ಸ.): ಆ್ಯಂಕರ್: ಎಲ್ ಪಿ ಜಿ ಅಭಾವವನ್ನು ನೀಗಿಸಲು ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
CM


ಬೆಂಗಳೂರು, 15 ಮಾರ್ಚ್ (ಹಿ.ಸ.):

ಆ್ಯಂಕರ್:

ಎಲ್ ಪಿ ಜಿ ಅಭಾವವನ್ನು ನೀಗಿಸಲು ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಎಲ್ ಪಿ ಜಿ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ವಿಧಾನಮಂಡಲದಲ್ಲಿ ಸರ್ಕಾರದ ವತಿಯಿಂದ ಈ ಬಗ್ಗೆ ಈಗಾಗಲೇ ಉತ್ತರ ನೀಡಲಾಗಿದೆ.. ಆಹಾರಕ್ಕಾಗಿ ಹೋಟೆಲ್ ಗಳ ಮೇಲೆ ಅವಲಂಬಿತರಾಗುವ ಜನಸಂಖ್ಯೆ ಸಾಕಷ್ಟಿದೆ. ಹೋಟೆಲ್ ವ್ಯವಸ್ಥೆ ಸ್ಥಗಿತಗೊಂಡರೆ, ಜನಜೀವನ ಅಸ್ತವ್ಯಸ್ಥವಾಗುತ್ತದೆ. ಕೇಂದ್ರ ಸಚಿವ ಹರದೀಪಸಿಂಗ ಪುರಿಯವರು ಎಲ್ ಪಿ ಜಿ ಪೂರೈಕೆಯಲ್ಲಿ ತೊಂದರೆಯಾಗದಂತೆ ನಿರ್ವಹಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದರು.

ಕರ್ನಾಟಕದಲ್ಲಿ ಮಾತ್ರ ಎಲ್ ಪಿ ಜಿ ಪೂರೈಕೆ ದೊಡ್ಡ ಸಮಸ್ಯೆಯಾಗಿದೆ ಎಂದು ಬಿಜೆಪಿಯ ನಾಯಕರು ಟೀಕಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ರಾಜ್ಯ ಬಿಜೆಪಿಯವರು ಮಾತನಾಡುವ ಬದಲು, ಎಲ್ ಪಿ ಹೆಚ್ಚಿನ ಸರಬರಾಜಿಗೆ ಕ್ರಮ ವಹಿಸಲಿ ಎಂದು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande