ಸಚಿವ ಆರ್.ಬಿ. ತಿಮ್ಮಾಪುರರಿಂದ ಸಾರ್ವಜನಿಕ ಅಹವಾಲು ಸ್ವೀಕಾರ
ಬಾಗಲಕೋಟೆ, 15 ಮಾರ್ಚ್ (ಹಿ.ಸ.) ಆ್ಯಂಕರ್ : ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳದ ಗೃಹ ಕಚೇರಿಯಲ್ಲಿ ಇಂದು ಸಚಿವ ಆರ್ ಬಿ ತಿಮ್ಮಾಪುರ ಅಹವಾಲು ಸ್ವೀಕಾರದರು. ಅವರು ಜನರ ಸಮಸ್ಯೆಗಳನ್ನು ಆಲಿಸಿ ಸಂಬಂಧಿತ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳ
R b Timmapur


ಬಾಗಲಕೋಟೆ, 15 ಮಾರ್ಚ್ (ಹಿ.ಸ.)

ಆ್ಯಂಕರ್ : ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳದ ಗೃಹ ಕಚೇರಿಯಲ್ಲಿ ಇಂದು ಸಚಿವ ಆರ್ ಬಿ ತಿಮ್ಮಾಪುರ ಅಹವಾಲು ಸ್ವೀಕಾರದರು.

ಅವರು ಜನರ ಸಮಸ್ಯೆಗಳನ್ನು ಆಲಿಸಿ ಸಂಬಂಧಿತ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನಾಗರಿಕರು ತಮ್ಮ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಸಚಿವರ ಮುಂದೆ ಮಂಡಿಸಿದರು. ರಸ್ತೆ, ಕುಡಿಯುವ ನೀರು, ವಸತಿ ಯೋಜನೆ, ವಿದ್ಯುತ್, ಪಿಂಚಣಿ, ಭೂ ದಾಖಲೆ ಸಮಸ್ಯೆಗಳು ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಜನರು ಮನವಿಗಳನ್ನು ಸಲ್ಲಿಸಿದರು.

ಸಚಿವರು ಪ್ರತಿಯೊಬ್ಬರ ಮನವಿಗಳನ್ನು ಗಮನದಿಂದ ಆಲಿಸಿ, ಸಾಧ್ಯವಾದಷ್ಟು ಬೇಗ ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಮೂಲಕವೇ ಸೂಚನೆ ನೀಡಿದರು. ಜನರಿಗೆ ತೊಂದರೆ ಆಗದಂತೆ ಆಡಳಿತ ವ್ಯವಸ್ಥೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಾರ್ವಜನಿಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುವುದು ಅತ್ಯಂತ ಮುಖ್ಯವಾಗಿದ್ದು, ಜನರ ಅಹವಾಲುಗಳನ್ನು ತ್ವರಿತವಾಗಿ ಬಗೆಹರಿಸುವುದು ಆಡಳಿತದ ಪ್ರಮುಖ ಕರ್ತವ್ಯವಾಗಿದೆ ಎಂದು ಸಚಿವರು ಹೇಳಿದರು. ಜನರು ತಮ್ಮ ಸಮಸ್ಯೆಗಳನ್ನು ನೇರವಾಗಿ ತಿಳಿಸಲು ಈ ರೀತಿಯ ಅಹವಾಲು ಸ್ವೀಕಾರ ಕಾರ್ಯಕ್ರಮಗಳನ್ನು ನಿಯಮಿತವಾಗಿ ಆಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಮುಧೋಳ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಬಂದ ಅನೇಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರಕ್ಕಾಗಿ ಮನವಿ ಮಾಡಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande