ನೈಸ್ ರಸ್ತೆಯಲ್ಲಿ ವಾಹನ ಡಿಕ್ಕಿ: ಮೂರು ವರ್ಷದ ಚಿರತೆ ಸಾವು
ಬೆಂಗಳೂರು, 15 ಮಾರ್ಚ್ (ಹಿ.ಸ.): ಆ್ಯಂಕರ್: ಭಾನುವಾರ ಮುಂಜಾನೆ ನೈಸ್ ರಸ್ತೆಯಲ್ಲಿ ವೇಗವಾಗಿ ಬಂದ ವಾಹನವೊಂದು ಮೂರು ವರ್ಷದ ಚಿರತೆಯನ್ನು ಅಪ್ಪಳಿಸಿದ ಪರಿಣಾಮ ಅದು ಮೃತಪಟ್ಟಿರುವ ಘಟನೆ ನಡೆದಿದೆ. ಕನಕಪುರ ಮತ್ತು ಬನ್ನೇರುಘಟ್ಟ ನಡುವಿನ ನೈಸ್ ರಸ್ತೆಯ ಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ಭಾಗವು ಅ
Lepord


ಬೆಂಗಳೂರು, 15 ಮಾರ್ಚ್ (ಹಿ.ಸ.):

ಆ್ಯಂಕರ್:

ಭಾನುವಾರ ಮುಂಜಾನೆ ನೈಸ್ ರಸ್ತೆಯಲ್ಲಿ ವೇಗವಾಗಿ ಬಂದ ವಾಹನವೊಂದು ಮೂರು ವರ್ಷದ ಚಿರತೆಯನ್ನು ಅಪ್ಪಳಿಸಿದ ಪರಿಣಾಮ ಅದು ಮೃತಪಟ್ಟಿರುವ ಘಟನೆ ನಡೆದಿದೆ.

ಕನಕಪುರ ಮತ್ತು ಬನ್ನೇರುಘಟ್ಟ ನಡುವಿನ ನೈಸ್ ರಸ್ತೆಯ ಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ಭಾಗವು ಅರಣ್ಯ ಪ್ರದೇಶಗಳಿಗೆ ಸಂಪರ್ಕ ಹೊಂದಿರುವುದರಿಂದ ಕಾಡು ಪ್ರಾಣಿಗಳು ರಸ್ತೆ ದಾಟುವ ಸಂಭವ ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಮನಾರ್ಹವಾಗಿ, ಇದೇ ರಸ್ತೆಯಲ್ಲಿ ಚಿರತೆ ಸಾವನ್ನಪ್ಪುತ್ತಿರುವುದು ಇದು ನಾಲ್ಕನೇ ಘಟನೆ ಎನ್ನಲಾಗಿದೆ. ಇದರಿಂದ ಅರಣ್ಯ ಇಲಾಖೆಯ ಆತಂಕ ಹೆಚ್ಚಾಗಿದೆ.

ಘಟನೆಗೆ ಸಂಬಂಧಿಸಿ ನಿರ್ಲಕ್ಷ್ಯ ತೋರಿದ ಆರೋಪದಡಿ ಕರ್ನಾಟಕ ಅರಣ್ಯ ಇಲಾಖೆ ನೈಸ್ ಕಂಪನಿಯ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಕಾಡು ಪ್ರಾಣಿಗಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande