
ವಿಜಯಪುರ, 15 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ನಗರಕ್ಕೆ ಕೇಂದ್ರ ಸಚಿವ ಪದರಹ್ಲಾದ್ ಜೋಶಿ
ಭೇಟಿ ನೀಡಿದರು. ಸ್ಥಳೀಯ
ಹಿರಿಯರೊಂದಿಗೆ ವಿಜಯಪುರ ಸಮೀಪದ ತೊರವಿಯ ತೋರವಿ ನರಸಿಂಹ ದೇವಾಲಯಕ್ಕೆ ಭೇಟಿ ನೀಡಿದ ಅವರು ನರಸಿಂಹ ದೇವರ ದರ್ಶನ ಪಡೆದರು.
ಈ ವೇಳೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇಶದ ಸಮೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.
ದೇವಸ್ಥಾನದ ಪೂಜಾರಿಗಳು ಅವರಿಗೆ ಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಭಕ್ತರು ಉಪಸ್ಥಿತರಿದ್ದರು
---------------
ಹಿಂದೂಸ್ತಾನ್ ಸಮಾಚಾರ್ / jyothi deshpande