
ಹುಬ್ಬಳ್ಳಿ, 15 ಮಾರ್ಚ್ (ಹಿ.ಸ.):
ಆ್ಯಂಕರ್: ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಮ್.ಆರ್.ಪಾಟೀಲ್ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕುಂದಗೋಳ ತಾಲೂಕಿನ ಚಿಕ್ಕನರ್ತಿ ಗ್ರಾಮದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪರಿಕರಗಳು, ನೋಟ್‌ಬುಕ್ ಹಾಗೂ ಪೆನ್‌ಗಳನ್ನು ವಿತರಿಸುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಪರೀಕ್ಷಾ ಸಾಮಗ್ರಿಗಳನ್ನು ವಿತರಿಸಿ ಶುಭಾಶಯ ಕೋರಲಾಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಶಾಸಕ ಎಂ.ಆರ್. ಪಾಟೀಲ್ ಅವರಿಗೆ ವಿಡಿಯೋ ಕಾಲ್ ಮೂಲಕ ಜನ್ಮದಿನದ ಶುಭಾಶಯಗಳನ್ನು ತಿಳಿಸಿ, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಅವರು ಇನ್ನಷ್ಟು ಶ್ರಮಿಸಲಿ ಹಾಗೂ ಅವರಿಗೆ ದೇವರು ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಲಿ ಎಂದು ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ವೇದಮೂರ್ತಿ ಜಗದವಯ್ಯ ಶಾಸ್ತ್ರಿಗಳು, ಮುಖಂಡರಾದ ಅಪ್ಪಣ್ಣ ನದಾಫ, ಗುರುಪಾದ ಸ್ವಾದಿ, ಸಂಜುಕುಮಾರ್ ಸೋಮರೆಡ್ಡಿ, ಮಂಜುನಾಥ್ ಸೋಮರೆಡ್ಡಿ, ಬಸವರಾಜ್ ಅರಳಿಕಟ್ಟಿ, ರವಿ ಬಾರಕೇರ, ಆಂದಪ್ಪ ಶಾನವಾಡ, ಮುತ್ತಪ್ಪ ಕುಸುಗಲ್, ಫಕೀರಪ್ಪ ಚಲವಾದಿ, ಬಸಪ್ಪ ಬಾರಕೇರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa