
ನವದೆಹಲಿ, 16 ಮಾರ್ಚ್ (ಹಿ.ಸ.):
ಆ್ಯಂಕರ್:
ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸೋಮವಾರ 144 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.
ಪಟ್ಟಿಯಲ್ಲಿ ಪ್ರಮುಖ ನಾಯಕರಾದ ಸುವೇಂದು ಅಧಿಕಾರಿ ಹಾಗೂ ಅಗ್ನಿಮಿತ್ರ ಪಾಲ್ ಅವರಿಗೆ ಟಿಕೆಟ್ ನೀಡಲಾಗಿದೆ. ಸುವೇಂದು ಅಧಿಕಾರಿ ಅವರನ್ನು ನಂದಿಗ್ರಾಮ ವಿಧಾನಸಭಾ ಕ್ಷೇತ್ರದಿಂದ, ಅಗ್ನಿಮಿತ್ರ ಪಾಲ್ ಅವರನ್ನು ಅಸನ್ಸೋಲ್ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷ ಘೋಷಿಸಿದೆ.
ಪಕ್ಷದ ಪ್ರಕಟಣೆಯ ಪ್ರಕಾರ, ಅಭ್ಯರ್ಥಿಗಳ ಆಯ್ಕೆ ಕುರಿತು ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದರು. ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ಮುದ್ರೆ ಒತ್ತಲಾಗಿದೆ.
ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಒಟ್ಟು 294 ಸ್ಥಾನಗಳಿದ್ದು, ಈ ಬಾರಿ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದ ಮತದಾನ ಏಪ್ರಿಲ್ 23, ಎರಡನೇ ಹಂತದ ಮತದಾನ ಏಪ್ರಿಲ್ 29 ರಂದು ನಡೆಯಲಿದ್ದು, ಮತ ಎಣಿಕೆ ಮೇ 4ರಂದು ನಡೆಯಲಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa