ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ
ಬಳ್ಳಾರಿ, 16 ಮಾರ್ಚ್ (ಹಿ.ಸ.) ಆ್ಯಂಕರ್ : ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡು ಒಟ್ಟು 32 ನ್ಯಾಯಾಲಯಗಳಲ್ಲಿ ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ಸುಸೂತ್ರವಾಗಿ ನಡೆದು, ವಿವಿಧ ವ್ಯಾಜ್ಯಗಳ ಪ್ರಕರಣಗಳು ವಿಲೇವಾರಿಯಾದವು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು
National Lok Adalat: Conciliation of various types of cases


National Lok Adalat: Conciliation of various types of cases


National Lok Adalat: Conciliation of various types of cases


ಬಳ್ಳಾರಿ, 16 ಮಾರ್ಚ್ (ಹಿ.ಸ.)

ಆ್ಯಂಕರ್ : ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡು ಒಟ್ಟು 32 ನ್ಯಾಯಾಲಯಗಳಲ್ಲಿ ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ಸುಸೂತ್ರವಾಗಿ ನಡೆದು, ವಿವಿಧ ವ್ಯಾಜ್ಯಗಳ ಪ್ರಕರಣಗಳು ವಿಲೇವಾರಿಯಾದವು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ.ಶಾಂತಿ ಅವರು ಖುದ್ದಾಗಿ ಪ್ರಕರಣಗಳ ವಿಲೇವಾರಿ ಮಾಡುವಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿರುವ ಎಲ್ಲಾ ನ್ಯಾಯಾಲಯಗಳಲ್ಲಿ ನಡೆದ ಲೋಕ್-ಅದಾಲತ್ಗಳನ್ನು ವೀಕ್ಷಿಸಿದರು.

ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕರು-ಕಕ್ಷಿದಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಿಕೊಳ್ಳುವುದು ಉತ್ತಮ ಜೀವನ ನಡೆಸಲು ಒಂದು ಸದಾವಕಾಶವಾಗಿದೆ. ತ್ವರಿತ ನ್ಯಾಯಕ್ಕಾಗಿ ಕಕ್ಷಿದಾರರು ಮುತುವರ್ಜಿ ವಹಿಸಿಕೊಂಡು, “ರಾಷ್ಟ್ರೀಯ ಲೋಕ್ ಅದಾಲತ್”ನಲ್ಲಿ ಭಾಗವಹಿಸಿದರೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆ ಹರಿಸಿಕೊಂಡು ಸಾಮರಸ್ಯ ಜೀವನ ನಡೆಸಬಹುದು ಎಂದರು.

ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿಗೆ ತೆಗೆದುಕೊಂಡಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ನ್ಯಾಯಾಲಯದ ನ್ಯಾಯಾಧೀಶರು, ವಕೀಲರು, ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಯ ಸಹಕಾರದೊಂದಿಗೆ ಮುಂದಿನ ದಿನಮಾನಗಳಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ಕಾರ್ಯಪ್ರವೃತ್ತರಾಗುತ್ತಾರೆ ಎಂದರು.

ಲೋಕ್ ಅದಾಲತ್ನ ಅಂಕಿಅಂಶ

ಇತ್ಯರ್ಥಗೊಂಡ ಬಾಕಿ ಪ್ರಕರಣಗಳ ಒಟ್ಟು ಸಂಖ್ಯೆ: 11,406 ಪ್ರಕರಣಗಳು.

ವಸೂಲಾದ ಪರಿಹಾರ ಮೊತ್ತ: ರೂ.37,86,70,940.

ಇತ್ಯರ್ಥಗೊಂಡ ವ್ಯಾಜ್ಯ ಪೂರ್ವ ಪ್ರಕರಣಗಳು: 6,47,139.

ವಸೂಲಾದ ಪರಿಹಾರ ಮೊತ್ತ: ರೂ.127,58,84,012.

ಇತ್ಯರ್ಥಗೊಳಿಸಿದ ಪ್ರಕರಣಗಳು:

ನ್ಯಾಯಾಲಯದಲ್ಲಿ ದೀರ್ಘಕಾಲದಿಂದ ಬಾಕಿ ಇದ್ದ 17,590 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಗುರುತಿಸಲಾಗಿತ್ತು. ಇವುಗಳಲ್ಲಿ 11,406 ಪ್ರಕರಣಗಳನ್ನು ಯಶಸ್ವಿಯಾಗಿ ಇತ್ಯರ್ಥಪಡಿಸಲಾಗಿದೆ.

ರಾಷ್ಟ್ರೀಯ ಲೋಕ್ ಅದಾಲತ್ ಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 27 ನ್ಯಾಯಪೀಠಗಳನ್ನು (ಬೆಂಚ್) ಸ್ಥಾಪಿಸಲಾಗಿತ್ತು.

ವಿವಾದಗಳ ಪರಿಹಾರಕ್ಕೆ ಮತ್ತು ಸಮುದಾಯದಲ್ಲಿ ಪರಸ್ಪರ ವಿಶ್ವಾಸವನ್ನು ಹೆಚ್ಚಿಸಲು ಲೋಕ್ ಅದಾಲತ್ಗಳು ಪರಿಣಾಮಕಾರಿ ಸಾಧನಗಳಾಗಿವೆ.

ಎಲ್ಲಾ ಪಾಲುದಾರರ ಸಹಕಾರ:

ಈ ಅದಾಲತ್ನ ಯಶಸ್ಸಿಗೆ ನ್ಯಾಯಾಧೀಶರು, ವಕೀಲರು, ಪೊಲೀಸ್ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಮತ್ತು ವಿಮಾ ಕಂಪನಿಗಳು ಸೇರಿದಂತೆ ಎಲ್ಲ ಪಾಲುದಾರರ ಸಹಕಾರ ಕಾರಣವಾಗಿದೆ ಎಂದು ತಿಳಿಸಿದರು.

ಲೋಕ್ ಅದಾಲತ್ಗಳು ವಿವಾದಗಳನ್ನು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಇತ್ಯರ್ಥಪಡಿಸುವಲ್ಲಿ ಎಷ್ಟು ಯಶಸ್ವಿಯಾಗಿವೆ ಎಂಬುದನ್ನು ತೋರಿಸುತ್ತವೆ. ಇದು ನ್ಯಾಯಾಂಗದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಮತ್ತು ಸಮಾಜದಲ್ಲಿ ಸೌಹಾರ್ದಯುತ ವಾತಾವರಣವನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಈ ರಾಷ್ಟ್ರೀಯ ಲೋಕ್ ಅದಾಲತ್ ಯಶಸ್ವಿಯಾಗಲು ಕಾರಣರಾದ ಎಲ್ಲರಿಗೂ ಅಭಿನಂದನೆ ತಿಳಿಸಿದರು.

ಇದೇ ವೇಳೆ ವಿವಿಧ ಕಲಹಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಂಡ ಕುಟುಂಬಗಳನ್ನು ಮಾತನಾಡಿಸಿ ಅಭಿನಂದಿಸಿರು.

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ರಾಜೇಶ್.ಎನ್ ಹೊಸಮನೆ ಸೇರಿದಂತೆ ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು, ಅಧಿಕಾರಿಗಳು ಇದ್ದರು.

-----------

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande