
ಕೋಲಾರ, ೧೬ ಮಾರ್ಚ್ (ಹಿ.ಸ):
ಆಂಕರ್ : ಸಾಮಾಜಿಕ ಜಾಲ ತಾಣಗಳಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ಗಳ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಬಗ್ಗೆ ವದಂತಿಗಳು ಹರಿದಾಡುತ್ತಿವೆ. ವಂದತಿಗಳನ್ನು ನಂಬದಂತೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯ ಉಪ ನಿರ್ದೇಶಕರು ಮನವಿ ಮಾಡಿದ್ದರು.
ಈ ಹಿಂದಿನಂತಯೇ ಜಿಲ್ಲೆಗೆ ಅಗತ್ಯವಿರುವ ಪ್ರಮಾಣದ ಅಡುಗೆ ಅನಿಲ ಸಿಲಿಂಡರ್ಗಳು ಸರಬಬರಾಜಾಗುತ್ತಿದ್ದು, ಮಾರ್ಚ್ ೧೫ ರಿಂದ ೧೦೨೭೯ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ಗಳ ದಾಸ್ತಾನು ಲಭ್ಯವಿರುತ್ತದೆ. ಗ್ರಾಹಕರು/ಸಾರ್ವಜನಿಕರು ಇಂತಹ ವದಂತಿಗಳಿಗೆ ಯಾರು ಸಹ ಕಿವಿಗೊಡಬಾರದೆಂದು ಹಾಗೂ ಆತಂಕಕ್ಕೊಳಗಾಗಬಾರದು. ಗೃಹ ಬಳಕೆ ಸಿಲಿಂಡರ್ಗಳನ್ನು ಅಕ್ರಮವಾಗಿ ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳುವುದು, ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡುವುದು ಮತ್ತು ಗೃಹಬಳಕೆ ಸಿಲಿಂಡರ್ಗಳನ್ನು ಬೇರೆಕಡೆ ಸಬರಾಜು ಮಾಡುವ ಪ್ರಕರಣಗಳನ್ನು ಪತ್ತೆಹಚ್ಚಲು ಜಿಲ್ಲಾ ಮಟ್ಟದಲ್ಲಿ ಮತ್ತು ತಾಲ್ಲೂಕು ಮಟ್ಟದಲ್ಲಿ ತಂಡಗಳನ್ನು ರಚನೆ ಮಾಡಲಾಗಿದೆ.
ನೋಡಲ್ ಅಧಿಕಾರಿಗಳನ್ನು ಸಹ ನೇಮಕಮಾಡಲಾಗಿದೆ. ತಹಶೀಲ್ದಾರ್ ಮತ್ತು ಆಹಾರ ಇಲಾಖೆಯ ಸಿಬ್ಬಂದಿ ವರ್ಗದವರೂ ಸಹ ತಪಾಸಣೆ ಮಾಡುತ್ತಿದ್ದು, ಮಾರ್ಚ್ ೧೫ರಂದು ಬಂಗಾರಪೇಟೆ ತಾಲ್ಲೂಕಿನವರು ಅನಧಿಕೃತ ದಾಸ್ತಾನು ಮಾಡಿದ್ದು, ೯ ಅನಿಲ ಸಿಲಿಂಡರ್ಗಳನ್ನು ಜಪ್ತಿ ಮಾಡಿ ಕ್ರಮ ಜರುಗಿಸಲಾಗಿದೆ. ಅಕ್ರಮವಾಗಿ ಅನಿಲ ಸಿಲಿಂಡರ್ಗಳನ್ನು ದಾಸ್ತಾನು ಮಾಡುವ ಕೃತ್ಯಗಳು ಕಂಡುಬಂದಲ್ಲಿ ಅಂತಹವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-೧೯೫೫ ರನ್ವಯ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸಲಾಗುವುದು. ಗ್ರಾಹಕರಗಳ ಯಾವುದೇ ದೂರುಗಳು ಇದ್ದಲ್ಲಿ ಉಪನಿರ್ದೇಶಕರು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ರವರ ಕಛೇರಿಯಲ್ಲಿನ ಸಹಾಯವಾಣಿ ದೂರವಾಣಿ ಸಂಖ್ಯೆ:೦೮೧೫೨೨೪೩೫೨೧ಗೆ ಕರೆ ಮಾಡಬಹುದೆಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್