ಪ್ರಗತಿ ಹಂತದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಜಿಪಂ ಅಧಿಕಾರಿಗಳಿಗೆ ಸೂಚನೆ
ವಿಜಯಪುರ, 16 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ತಿಕೋಟಾ, ಬಬಲೇಶ್ವರ ಹಾಗೂ ವಿಜಯಪುರ ತಾಲೂಕುಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ನಡೆಯುತ್ತಿರುವ ರಸ್ತೆ ಹಾಗೂ ಸೇತುವೆ ಕಾಮಗಾರಿಗಳನ್ನು ಪರಿಶೀಲಿಸಿದರು. ತಿಕೋಟಾ ತಾಲೂಕಿನ ಹರನಾಳ
ಜಿಪಂ


ವಿಜಯಪುರ, 16 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ತಿಕೋಟಾ, ಬಬಲೇಶ್ವರ ಹಾಗೂ ವಿಜಯಪುರ ತಾಲೂಕುಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ನಡೆಯುತ್ತಿರುವ ರಸ್ತೆ ಹಾಗೂ ಸೇತುವೆ ಕಾಮಗಾರಿಗಳನ್ನು ಪರಿಶೀಲಿಸಿದರು.

ತಿಕೋಟಾ ತಾಲೂಕಿನ ಹರನಾಳ ಗ್ರಾಮದಲ್ಲಿ ಪೂರ್ಣಗೊಂಡಿರುವ ಡೋಣಿ ನದಿಯ ಹೂಳು ತೆಗೆಯುವ ಕಾಮಗಾರಿಯನ್ನು ಅವರು ಪರಿಶೀಲಿಸಿದರು. ಬಳಿಕ ಬಬಲೇಶ್ವರ ತಾಲೂಕಿನ ಸಾರವಾಡ ಹಾಗೂ ಹೊನಗನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸೇತುವೆ ಹಾಗೂ ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮದ ಸಮೀಪದ ಸೇತುವೆಗಳ ಹೂಳು ತೆಗೆಯುವ ಕಾಮಗಾರಿಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಅವುಗಳನ್ನು ನಿಯಮಾನುಸಾರ ಮತ್ತು ಆದ್ಯತೆಯ ಮೇರೆಗೆ ಶೀಘ್ರ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಹಿಟ್ಟಿನಹಳ್ಳಿ ಗ್ರಾಮದ ಸೇತುವೆ ಕಾಮಗಾರಿಗೆ ಸಂಬಂಧಿಸಿದ ಸಮೀಕ್ಷೆಯನ್ನು ತುರ್ತಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸಂಜಯ ಕೋಟೆನ್ನವರ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ವಿದ್ಯಾಧರ ನ್ಯಾಮಗೊಂಡ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರವಿ ಪವಾರ ಸೇರಿದಂತೆ ತಾಲೂಕು ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande