ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ 44 ವಿಮಾನಗಳ ಹಾರಾಟ: ಏರ್ ಇಂಡಿಯಾ ನಿರ್ಧಾರ
ನವದೆಹಲಿ, 17 ಮಾರ್ಚ್ (ಹಿ.ಸ.): ಆ್ಯಂಕರ್: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ನಡುವೆಯೂ ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಗಳು ಮಂಗಳವಾರ ಒಟ್ಟು 44 ವಿಮಾನಗಳ ಹಾರಾಟ ನಡೆಸಲಿವೆ ಎಂದು ತಿಳಿಸಿವೆ. ಕಂಪನಿಯ ಪ್ರಕಟಣೆಯ ಪ್ರಕಾರ, ಮಾರ್ಚ್ 17, 2026 ರಂದ
Flight


ನವದೆಹಲಿ, 17 ಮಾರ್ಚ್ (ಹಿ.ಸ.):

ಆ್ಯಂಕರ್:

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ನಡುವೆಯೂ ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಗಳು ಮಂಗಳವಾರ ಒಟ್ಟು 44 ವಿಮಾನಗಳ ಹಾರಾಟ ನಡೆಸಲಿವೆ ಎಂದು ತಿಳಿಸಿವೆ.

ಕಂಪನಿಯ ಪ್ರಕಟಣೆಯ ಪ್ರಕಾರ, ಮಾರ್ಚ್ 17, 2026 ರಂದು ಪಶ್ಚಿಮ ಏಷ್ಯಾ ಪ್ರದೇಶಕ್ಕೆ ಹಾಗೂ ಅಲ್ಲಿಂದ 44 ನಿಗದಿತ ಮತ್ತು ನಿಗದಿತವಲ್ಲದ ವಿಮಾನಗಳನ್ನು ಸಂಚರಿಸಲಾಗುತ್ತದೆ. ಈ ವಿಮಾನಗಳು ಮಸ್ಕತ್ ಮತ್ತು ಜೆಡ್ಡಾ ಸೇರಿದಂತೆ ಹಲವು ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸಲಿವೆ.

ಇದೇವೇಳೆ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮವಾಗಿ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಂತರರಾಷ್ಟ್ರೀಯ ವಿಮಾನಗಳ ಲ್ಯಾಂಡಿಂಗ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದೆ.

ಈ ಹಿನ್ನೆಲೆಯಲ್ಲಿ ಇಂಡಿಗೋ, ಏರ್ ಇಂಡಿಯಾ ಗುಂಪು,ಸ್ಪೈಸ್‌ಜೆಟ್ ತಮ್ಮ ದುಬೈ ವಿಮಾನ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿವೆ.

ಇಂಡಿಗೋ ಸಂಸ್ಥೆ ಎಕ್ಸ್‌ನಲ್ಲಿ ನೀಡಿದ ಪ್ರಕಟಣೆಯಲ್ಲಿ, “ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿ ಮುಂದಿನ ಸೂಚನೆ ಬರುವವರೆಗೂ ದುಬೈಗೆ ಲ್ಯಾಂಡಿಂಗ್ ಅನುಮತಿ ಸ್ಥಗಿತಗೊಳಿಸಲಾಗಿದೆ” ಎಂದು ತಿಳಿಸಿದೆ.

ಸ್ಪೈಸ್‌ಜೆಟ್ ಕೂಡ ಇದೇ ರೀತಿಯಾಗಿ ತನ್ನ ಸೇವೆಗಳನ್ನು ಸ್ಥಗಿತಗೊಳಿಸಿರುವುದಾಗಿ ಘೋಷಿಸಿದೆ.

ಪ್ರದೇಶದಲ್ಲಿ ಸಂಘರ್ಷ ಮುಂದುವರಿದಿರುವ ಕಾರಣ, ಮುಂದಿನ ದಿನಗಳಲ್ಲಿ ವಿಮಾನ ಸಂಚಾರದಲ್ಲಿ ಇನ್ನಷ್ಟು ಬದಲಾವಣೆಗಳಾಗುವ ಸಾಧ್ಯತೆ ಇದೆ. ಪ್ರಯಾಣಿಕರು ತಮ್ಮ ವಿಮಾನಗಳ ಸ್ಥಿತಿಯನ್ನು ಮುಂಚಿತವಾಗಿ ಪರಿಶೀಲಿಸುವಂತೆ ವಿಮಾನಯಾನ ಸಂಸ್ಥೆಗಳು ಸೂಚಿಸಿವೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande