ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಡಿಸಿ ಸಂಗಪ್ಪ
ಬಾಗಲಕೋಟೆ, 17 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಜಾರಿಯಾದ ಮಾದರಿ ನೀತಿ ಸಂಹಿತೆಯನ್ನು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭಾಂಗ
ಡಿಸಿ


ಬಾಗಲಕೋಟೆ, 17 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಜಾರಿಯಾದ ಮಾದರಿ ನೀತಿ ಸಂಹಿತೆಯನ್ನು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಇಂದು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉಪಚುನಾವಣೆಗೆ ಅಧಿಸೂಚನೆ ಹೊರಡಿಸಿರುವ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗ ಜಾರಿಗೊಳಿಸಿರುವ ಮಾದರಿ ನೀತಿ ಸಂಹಿತೆಯನ್ನು ಸಂಪೂರ್ಣವಾಗಿ ಅನುಸರಿಸಬೇಕು ಎಂದು ಹೇಳಿದರು.

ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಯನ್ನು ನಡೆಸಲು ಎಲ್ಲ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಸಹಕರಿಸಬೇಕು. ನಿಯಮ ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ಬಾಗಲಕೋಟೆ ತಹಶೀಲ್ದಾರ ವಾಸುದೇವ ಸ್ವಾಮಿ, ಹುನಗುಂದ ತಹಶೀಲ್ದಾರ ಡಾ. ಪ್ರದೀಪಕುಮಾರ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande