
ವಿಜಯಪುರ, 17 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿಂದು ತಹಶೀಲ್ದಾರ್ ಕಾರ್ಯಾಲಯದ ಎದುರು ಯುವ ಅಧಿವೇಶನ ನಡೆಯಿತು.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಲ್ಲಿ ದೀರ್ಘಕಾಲದಿಂದ ಖಾಲಿ ಉಳಿದಿರುವ ಲಕ್ಷಾಂತರ ಸರ್ಕಾರಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕೆಂದು ಯುವಕರು ಆಗ್ರಹಿಸಿದರು.
ಅಧಿವೇಶನದ ಬಳಿಕ ಯುವಕರ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಯಿತು.
ಅಧಿವೇಶನಕ್ಕೆ ವಕೀಲರಾದ ಮಾತೀನ್ ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರವು ಯುವಕರ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಖಾಲಿ ಹುದ್ದೆಗಳ ಭರ್ತಿಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಉದ್ಯೋಗಾವಕಾಶಗಳ ಕೊರತೆಯಿಂದ ಯುವಕರು ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಸ್ಪಂದಿಸಬೇಕಾಗಿದೆ ಎಂದು ಹೇಳಿದರು. ಯುವಕರು ತಮ್ಮ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande