ಕೇಂದ್ರ ಕೊಟ್ಟ ಹಣವನ್ನೂ ಬಳಸದ ರಾಜ್ಯ ಸರ್ಕಾರ: ಅಶೋಕ
ಬೆಂಗಳೂರು, 17 ಮಾರ್ಚ್ (ಹಿ.ಸ.): ಆ್ಯಂಕರ್: ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್.ಅಶೋಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದ ಸ್ಥಿತಿ “ದೇವರು ಕೊಟ್ಟರೂ ಪೂಜ
Ashok


ಬೆಂಗಳೂರು, 17 ಮಾರ್ಚ್ (ಹಿ.ಸ.):

ಆ್ಯಂಕರ್:

ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್.ಅಶೋಕ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದ ಸ್ಥಿತಿ “ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ” ಎನ್ನುವಂತಾಗಿದೆ ಎಂದು ಅವರು ಆರೋಪಿಸಿದ್ದಾರೆ. ಒಂದೆಡೆ ರಾಜ್ಯದ ಖಜಾನೆ ಖಾಲಿ ಮಾಡಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲು ಸಾಧ್ಯವಾಗದ ಸ್ಥಿತಿಯಲ್ಲಿ ಸರ್ಕಾರ ದಿವಾಳಿಯಾಗಿದೆ. ಮತ್ತೊಂದೆಡೆ ಕೇಂದ್ರ ಸರ್ಕಾರ ನೀಡಿದ ಅನುದಾನವನ್ನೂ ಸಕಾಲಕ್ಕೆ ಬಳಸಲಾಗದೆ ಮರಳಿ ಕಳುಹಿಸುವ ಪರಿಸ್ಥಿತಿ ಉಂಟಾಗಿದೆ ಎಂದಿದ್ದಾರೆ.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು CITIIS 2.0 ಯೋಜನೆಯಡಿ ನಗರಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದ ಮೊದಲ ಕಂತಿನ ಅನುದಾನವನ್ನು ಬಳಸಲು ವಿಫಲವಾಗಿದೆ. ಇದರ ಪರಿಣಾಮವಾಗಿ ಆ ಹಣವನ್ನು ಮತ್ತೆ ಕೇಂದ್ರಕ್ಕೆ ಹಿಂತಿರುಗಿಸುವ ಸ್ಥಿತಿ ನಿರ್ಮಾಣವಾಗಿದೆ. ಇದು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ರಾಜ್ಯದ ಜನತೆಗೆ ಮಾಡಿದ ದ್ರೋಹ ಎಂದು ಅಶೋಕ್ ಆರೋಪಿಸಿದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧವೂ ವಾಗ್ದಾಳಿ ನಡೆಸಿ, ಸರ್ಕಾರ ಅಭಿವೃದ್ಧಿ ಕಾರ್ಯಗಳಿಗಿಂತ ರಾಜಕೀಯ ಸಭೆಗಳು, ಡಿನ್ನರ್ ಮೀಟಿಂಗ್‌ಗಳು ಮತ್ತು ಒಳರಾಜಕೀಯದಲ್ಲೇ ಸಮಯ ಕಳೆಯುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಕೇಂದ್ರದಿಂದ ಬಂದ ಅನುದಾನವನ್ನು ಸಮರ್ಪಕವಾಗಿ ಬಳಸುವ ಸಾಮರ್ಥ್ಯವೇ ಸರ್ಕಾರಕ್ಕೆ ಇಲ್ಲದಿದ್ದರೆ ಅಧಿಕಾರ ತ್ಯಜಿಸಬೇಕು. ಈ ನಿಷ್ಕ್ರಿಯ ಮತ್ತು ಭ್ರಷ್ಟ ಸರ್ಕಾರ ಮುಂದುವರಿದರೆ ಕರ್ನಾಟಕದ ಪ್ರಗತಿ ಸಾಧ್ಯವಿಲ್ಲ ಎಂದು ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande