ತೆರಿಗೆ ವಸೂಲಾತಿಯಲ್ಲಿ ೨೨ ಗ್ರಾಮ ಪಂಚಾಯಿತಿಗಳಲ್ಲಿ ಶೇ. ೧೦೦ರಷ್ಟು ಪ್ರಗತಿ
ತೆರಿಗೆ ವಸೂಲಾತಿಯಲ್ಲಿ ೨೨ ಗ್ರಾಮ ಪಂಚಾಯಿತಿಗಳಲ್ಲಿ ಶೇ. ೧೦೦ರಷ್ಟು ಪ್ರಗತಿಉ
: ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ ಬಾಗೇವಾಡಿ ವಿವಿಧ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು, ತೆರಿಗೆ ವಸೂಲಾತಿ ಮತ್ತು ಸಾರ್ವಜನಿಕ ಸೇವೆಗಳ ಅನುಷ್ಠಾನದ ಕುರಿತು ಸಮಗ್ರ ಚರ್ಚೆ ನಡೆಸಿದರು.


ಕೋಲಾರ,೧೭ಮಾರ್ಚ (ಹಿ.ಸ.):

ಆಂಕರ್ ; ಬೇಸಿಗೆ ಮುಂಜಾಗ್ರತೆಯಾಗಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಎಚ್ಚರ ವಹಿಸಲು ಹಾಗೂ ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಲ್ಲಾ ತಾಲ್ಲೂಕು ಗಳಲ್ಲಿ ಸಹಾಯವಾಣಿ ತೆರೆಯಲಾಗಿದೆ ಎಂದು

ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ ಬಾಗೇವಾಡಿ ಅವರು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣ ದಲ್ಲಿ ಉಪಲೋಕಾಯುಕ್ತರು ಜಿಲ್ಲೆಯಲ್ಲಿ ವಿವಿಧ ತಾಲ್ಲೂಕುಗಳಲ್ಲಿ ಗ್ರಾಮಪಂಚಾಯ್ತಿ ಅಧಿಕಾರಿಗಳ ಕಚೇರಿ ಭೇಟಿ ಮಾಡಿದ ಸಂದರ್ಭದಲ್ಲಿ ಗುರುತಿಸಲಾದ ಅಂಶಗಳ ಕುರಿತು ಆಡಳಿತಾಧಿಕಾರಿಗಳ ಮಹತ್ವದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು, ತೆರಿಗೆ ವಸೂಲಾತಿ ಮತ್ತು ಸಾರ್ವಜನಿಕ ಸೇವೆಗಳ ಅನುಷ್ಠಾನದ ಕುರಿತು ಸಮಗ್ರ ಚರ್ಚೆ ನಡೆಸುತ್ತಾ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು ೨೪೬ ನ್ಯಾಯಾಲಯ ಪ್ರಕರಣಗಳು ಬಾಕಿ ಇದ್ದು, ಈ ಪೈಕಿ ೧೩೯ ಪ್ರಕರಣಗಳಲ್ಲಿ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಿಇಒ ಅವರು, ಶೀಘ್ರವಾಗಿ ಅಫಿಡವಿಟ್ ಸಲ್ಲಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸೂಚಿಸಿದರು.

ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಒಟ್ಟು ೧೮,೭೭೧ ನಾಯಿಗಳನ್ನು ಗುರುತಿಸಲಾಗಿದೆ. ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ (ಂಃಅ) ನಡೆಸಲು ಪ್ರತಿ ತಾಲ್ಲೂಕಿಗೆ ೧೦೦ ಲಕ್ಷ ರೂ.ಗಳಂತೆ ಒಟ್ಟು ೬೦೦ ಲಕ್ಷ ರೂ.ಗಳ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು ೧,೨೩೯ ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಈ ಪೈಕಿ ೧,೧೦೩ ಘಟಕಗಳು ಸುಸ್ಥಿತಿಯಲ್ಲಿವೆ ಮತ್ತು ೧೩೬ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ. ಈ ಘಟಕಗಳನ್ನು ತಕ್ಷಣವೇ ದುರಸ್ತಿಗೊಳಿಸಿ ಸಾರ್ವಜನಿಕರಿಗೆ ನೀರು ಪೂರೈಸಲು ಅಧಿಕಾರಿಗಳಿಗೆ ಆದೇಶಿಸಿದರು.

೨೦೨೫-೨೬ನೇ ಸಾಲಿನ ತೆರಿಗೆ ವಸೂಲಾತಿಯಲ್ಲಿ ಜಿಲ್ಲೆಯು ಶೇ. ೮೨% ರಷ್ಟು ೪೦.೪೪ಕೋಟಿ ವಸೂಲಿ ಮಾಡಿ ಸಾಧನೆ ಮಾಡಿದೆ. ಬಂಗಾರಪೇಟೆ ತಾಲ್ಲೂಕು ಶೇ. ೮೩.೨೧ ರಷ್ಟು ಪ್ರಗತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಶ್ರೀನಿವಾಸಪುರ (ಶೇ. ೮೧.೦೪) ಮತ್ತು ಮಾಲೂರು (ಶೇ. ೮೦.೭೫) ನಂತರದ ಸ್ಥಾನಗಳಲ್ಲಿವೆ. ೨೨ ಗ್ರಾಮಪಂಚಾಯಿತಿ ಗಳುಶೇ ೧೦೦% ತೆರಿಗೆ ವಸೂಲಿ ಮಾಡಿ ಸರ್ಕಾರಕ್ಕೆ ಪಾವತಿ ಮಾಡಲಾಗಿದೆ. ತೆರಿಗೆ ಬಾಕಿ ಇರುವ ಪಂಚಾಯತ್ಗಳು ಮಾರ್ಚ್ ಅಂತ್ಯದೊಳಗೆ ಶೇ. ೧೦೦ ಗುರಿ ತಲುಪಲು ಕ್ರಮ ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಒಟ್ಟು ೧,೮೮೭ ಕೆರೆಗಳಿದ್ದು, ಇವುಗಳಲ್ಲಿ ೮೭೯ ಕೆರೆಗಳಲ್ಲಿ ಒತ್ತುವರಿ ಗುರುತಿಸಲಾಗಿದೆ. ಇದುವರೆಗೆ ೭೦೬ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲಾಗಿದ್ದು, ಬಾಕಿ ಇರುವ ೧೭೩ ಕೆರೆಗಳ ಒತ್ತುವರಿಯನ್ನು ಶೀಘ್ರವಾಗಿ ತೆರವುಗೊಳಿಸಲು ಸರ್ವೆ ಕಾರ್ಯ ಚುರುಕುಗೊಳಿಸಲು ಸೂಚಿಸಿದರು.

ಪ್ರಸಕ್ತ ಸಾಲಿನ ಮಾನವ ದಿನಗಳ ಸೃಜನೆಯಲ್ಲಿ ಜಿಲ್ಲೆಯು ಉತ್ತಮ ಪ್ರಗತಿ ಸಾಧಿಸುತ್ತಿದೆ. ಬಂಗಾರಪೇಟೆ ತಾಲ್ಲೂಕಿನಲ್ಲಿ ಶೇ. ೩೧.೩೧ ರಷ್ಟು ಆರ್ಥಿಕ ಪ್ರಗತಿಯಾಗಿದೆ. ಕೂಸಿನ ಮನೆ ಮತ್ತು ಶಾಲಾ ಶೌಚಾಲಯಗಳ ನಿರ್ಮಾಣ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ತಿಳಿಸಲಾಯಿತು.

ಜಿಲ್ಲೆಯಲ್ಲಿ ೧೦೦% ಭಿಕ್ಷುಕರ ಕರ ವಸೂಲಿ ಮಾಡಲಾಗಿದ್ದು ಈ ಸಂಬಂಧ ೩.೧೪ ಕೋಟಿ ರೂ ಗಳನ್ನು ಸರ್ಕಾರಕ್ಕೆ ಪಾವತಿಸಲಾಗಿದೆ ಎಂದರು.

ಸಭೆಯಲ್ಲಿ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸುವ ಬಗ್ಗೆ ಚರ್ಚಿಸಲಾಯಿತು. ಕರ್ತವ್ಯ ಲೋಪ ಎಸಗುವ ಅಥವಾ ಅಭಿವೃದ್ಧಿ ಕಾಮಗಾರಿಗಳಲ್ಲಿ ವಿಳಂಬ ಧೋರಣೆ ಅನುಸರಿಸುವ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಪ್ರವೀಣ್ ಪಿ ಬಾಗೇವಾಡಿ ಅವರು ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾ ರ್ಯದರ್ಶಿ ಟಿ.ಕೆ. ರಮೇಶ್ , ಯೋಜನಾ ನಿರ್ದೇಶಕ ವೆಂಕಟಾಚಲಪತಿ, ಎಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳು ಹಾಗೂ ಎಲ್ಲಾ ತಾಲ್ಲೂಕುಗಳ ಕಾರ್ಯನಿರ್ವಾ ಹಕ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande