ಎಚ್ ಪಿ ವಿ ಲಸಿಕೆ ಅಭಿಯಾನಕ್ಕೆ ವೇಗ: ಎರಡು ವಾರಗಳಲ್ಲಿ 3 ಲಕ್ಷ ಬಾಲಕಿಯರಿಗೆ ಲಸಿಕೆ
ನವದೆಹಲಿ, 17 ಮಾರ್ಚ್ (ಹಿ.ಸ.): ಆ್ಯಂಕರ್: ದೇಶಾದ್ಯಂತ ಹ್ಯೂಮನ್ ಪ್ಯಾಪಿಲೋಮವೈರಸ್ ವಿರುದ್ಧದ ಲಸಿಕೆ ಅಭಿಯಾನಕ್ಕೆ ವೇಗ ಸಿಕ್ಕಿದ್ದು, ಕೇವಲ ಎರಡು ವಾರಗಳಲ್ಲಿ ಸುಮಾರು 3 ಲಕ್ಷ ಹದಿಹರೆಯದ ಬಾಲಕಿಯರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 14 ವರ್ಷ ಹಾಗೂ ಅದಕ್ಕಿಂತ ಹೆಚ
MHFA


ನವದೆಹಲಿ, 17 ಮಾರ್ಚ್ (ಹಿ.ಸ.):

ಆ್ಯಂಕರ್:

ದೇಶಾದ್ಯಂತ ಹ್ಯೂಮನ್ ಪ್ಯಾಪಿಲೋಮವೈರಸ್ ವಿರುದ್ಧದ ಲಸಿಕೆ ಅಭಿಯಾನಕ್ಕೆ ವೇಗ ಸಿಕ್ಕಿದ್ದು, ಕೇವಲ ಎರಡು ವಾರಗಳಲ್ಲಿ ಸುಮಾರು 3 ಲಕ್ಷ ಹದಿಹರೆಯದ ಬಾಲಕಿಯರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

14 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ವಯಸ್ಸಿನ ಬಾಲಕಿಯರನ್ನು ಗುರಿಯಾಗಿಸಿಕೊಂಡು ಈ ಅಭಿಯಾನವನ್ನು ನಡೆಸಲಾಗುತ್ತಿದೆ. ಮಧ್ಯಪ್ರದೇಶ, ಆಂಧ್ರಪ್ರದೇಶ, ತಮಿಳುನಾಡು, ಗುಜರಾತ್, ಒಡಿಶಾ ಮತ್ತು ಮಿಜೋರಾಂ ರಾಜ್ಯಗಳಲ್ಲಿ ಈ ಕಾರ್ಯಕ್ರಮ ಚುರುಕುಗೊಂಡಿದ್ದು, ಶಾಲೆಗಳು ಮತ್ತು ಆರೋಗ್ಯ ಇಲಾಖೆಗಳ ಸಮನ್ವಯದಲ್ಲಿ ಲಸಿಕೆ ಕಾರ್ಯ ಪರಿಣಾಮಕಾರಿಯಾಗಿ ಸಾಗುತ್ತಿದೆ.

ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಎಚ್ ಪಿವಿ ಲಸಿಕೆ ಪ್ರಮುಖ ಪಾತ್ರ ವಹಿಸುತ್ತದೆ. ಈ ಹಿನ್ನೆಲೆಯಲ್ಲಿ, ಪೋಷಕರು, ಶಾಲೆಗಳು ಹಾಗೂ ಸಮುದಾಯಗಳಲ್ಲಿ ಜಾಗೃತಿ ಹೆಚ್ಚುತ್ತಿರುವುದು ಲಸಿಕೆ ಸ್ವೀಕಾರದ ಪ್ರಮಾಣ ಹೆಚ್ಚಲು ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಆರಂಭವಾದ ಈ ಅಭಿಯಾನಕ್ಕೆ ಪರೀಕ್ಷಾ ಅವಧಿಯ ನಡುವೆಯೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಪರೀಕ್ಷೆಗಳು ಮುಗಿದ ನಂತರ ಅಭಿಯಾನ ಇನ್ನಷ್ಟು ವೇಗ ಪಡೆಯುವ ನಿರೀಕ್ಷೆಯಿದೆ.

ಲಸಿಕೆ ಪ್ರಕ್ರಿಯೆಯನ್ನು ಸುಗಮಗೊಳಿಸಲು ಆರೋಗ್ಯ ಇಲಾಖೆ ಶಾಲೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ಆರೋಗ್ಯ ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸುತ್ತಿದೆ. ಅರ್ಹ ಬಾಲಕಿಯರು ಸಮಯಕ್ಕೆ ಸರಿಯಾಗಿ ಲಸಿಕೆ ಪಡೆಯಲು ಪೋಷಕರನ್ನು ಪ್ರೋತ್ಸಾಹಿಸಲಾಗುತ್ತಿದೆ.

ಹೆಣ್ಣುಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ರಕ್ಷಿಸುವ ದಿಸೆಯಲ್ಲಿ ಈ ಅಭಿಯಾನ ಮಹತ್ವದ ಹೆಜ್ಜೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande