ಎನ್ಸಿಬಿ ಸ್ಥಾಪನಾ ದಿನ: ಸಿಬ್ಬಂದಿಗೆ ಶುಭಾಶಯ ಕೋರಿದ ಅಮಿತ್ ಶಾ
ನವದೆಹಲಿ, 17 ಮಾರ್ಚ್ (ಹಿ.ಸ.): ಆ್ಯಂಕರ್: ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು, ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಸ್ಥಾಪನಾ ದಿನದ ಅಂಗವಾಗಿ ಸಂಸ್ಥೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರ
Amit sha


ನವದೆಹಲಿ, 17 ಮಾರ್ಚ್ (ಹಿ.ಸ.):

ಆ್ಯಂಕರ್:

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು, ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಸ್ಥಾಪನಾ ದಿನದ ಅಂಗವಾಗಿ ಸಂಸ್ಥೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ನಮ್ಮ ಯುವಕರನ್ನು ಮಾದಕ ವಸ್ತುಗಳ ಅಕ್ರಮ ವ್ಯಾಪಾರ ಮತ್ತು ದುಷ್ಪರಿಣಾಮಗಳಿಂದ ರಕ್ಷಿಸುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿರುವ ಪ್ರಮುಖ ಸಂಸ್ಥೆಯಾಗಿ ಎನ್‌ಸಿಬಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ. ಸಂಸ್ಥೆ ತನ್ನ ಕರ್ತವ್ಯವನ್ನು ಚಾತುರ್ಯ ಮತ್ತು ಸಮರ್ಪಣೆಯೊಂದಿಗೆ ನಿಭಾಯಿಸುತ್ತಿದ್ದು, ದೇಶವನ್ನು ಮಾದಕ ವಸ್ತುಗಳ ಕಾಟದಿಂದ ಮುಕ್ತಗೊಳಿಸುವ ಪ್ರಯತ್ನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಶ್ಲಾಘಿಸಿದ್ದಾರೆ.

ಇದೇ ವೇಳೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ಮಾದಕ ವಸ್ತು ಮುಕ್ತ ಭಾರತ’ದ ದೃಷ್ಟಿಕೋನವನ್ನು ಸಾಧಿಸಲು ಎನ್‌ಸಿಬಿ ಗಮನಾರ್ಹ ವೇಗದಲ್ಲಿ ಕಾರ್ಯನಿರ್ವಹಿಸುತ್ತಿದೆ, ರಾಷ್ಟ್ರವು ಎನ್‌ಸಿಬಿ ಸಿಬ್ಬಂದಿಯ ಸಮರ್ಪಣೆ, ಶ್ರಮ ಮತ್ತು ದೇಶಭಕ್ತಿಗೆ ವಂದಿಸುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande