
ಕೋಲಾರ,೧೭ಮಾರ್ಚ (ಹಿ.ಸ.)
ಆಂಕರ್ ; ಜಿಲ್ಲೆಯಲ್ಲಿ ಇದೇ ಮಾಚ್ ೧೮ರಿಂದ ಆರಂಭವಾಗುವ ೨೦೨೬ರ ಎಸ್.ಎಸ್.ಎಲ್.ಸಿ ಪರೀಕ್ಷೆ-೧ ಅನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತವು ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಮಾನ್ಯ ಜಿಲ್ಲಾಧಿಕಾರಿಗಳಾದ ಡಾ.ಎಂ.ಆರ್.ರವಿ ತಿಳಿಸಿದರು.
ನಿರ್ಮಿತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪರೀಕ್ಷಾ ಕ್ರಮಗಳ ಕುರಿತು ಅವರು ವಿವರಗಳನ್ನು ಹಂಚಿಕೊಂಡರು.
ಪರೀಕ್ಷೆಯು ೧೮-೦೩-೨೦೨೬ ರಿಂದ ೦೨-೦೪-೨೦೨೬ ರವರೆಗೆ ಬೆಳಿಗ್ಗೆ ೧೦:೦೦ ಗಂಟೆಯಿಂದ ಮಧ್ಯಾಹ್ನ ೧:೧೫ ಗಂಟೆಯವರೆಗೆ ನಡೆಯಲಿದೆ ಎಂದರು.
ಈಗಾಗಲೇ ಜಿಲ್ಲೆಯಲ್ಲಿ ೩ ಹಂತದ ಪೂರ್ವಸಿದ್ಧತೆ ಪರೀಕ್ಷೆಗಳನ್ನು ನಡೆಸಲಾಗಿದ್ದು, ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಶೇ ೫೮%, ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ೭೫.೯%, ೩ನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ೮೫.೫೯% ಫಲಿತಾಂಶದೊಂದಿಗೆ ಕೋಲಾರ ಜಿಲ್ಲೆಯು ಬೆಂಗಳೂರು ವಿಭಾಗದಲ್ಲಿ ೨ನೇ ಸ್ಥಾನ ಹಾಗೂ ರಾಜ್ಯಮಟ್ಟದಲ್ಲಿ ೭ನೇ ಸ್ಥಾನ ಪಡೆದಿರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆದಿರುತ್ತದೆ.
ಈ ಬಾರಿ ಜಿಲ್ಲೆಯಲ್ಲಿ ಒಟ್ಟು ೧೯,೪೭೪ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಇದರಲ್ಲಿ ೧೭,೯೬೧ ಹೊಸಬರು, ೧,೦೦೩ ಪುನ ರಾವರ್ತಿತ ಮತ್ತು ೫೧೦ ಖಾಸಗಿ ಅಭ್ಯರ್ಥಿ ಗಳಿದ್ದಾರೆ. ಇವರಲ್ಲಿ ೯,೮೪೮ ಬಾಲಕಿಯರು, ೯,೬೨೬ ಬಾಲಕರು ಹಾಗೈ ೮೭ ವಿಶೇಷ ಚೇತನ ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಜಿಲ್ಲೆಯಾದ್ಯಂತ ಕೋಲಾರ ೧೮, ಮುಳಬಾಗಿಲು ೧೨, ಶ್ರೀನಿವಾಸಪುರ ೧೦, ಕೆಜಿಎಫ್ ೦೯, ಮಾಲೂರು ೦೮ ಮತ್ತು ಬಂಗಾರಪೇಟೆ: ೦೮ ಸೇರಿದಂತೆ ಒಟ್ಟು ೬೫ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಎಲ್ಲಾ ೬೫ ಕೇಂದ್ರಗಳ ಒಟ್ಟು ೧೦೫೩ ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಛೇರಿಯಲ್ಲಿ ವೆಬ್ ಕಾಸ್ಟಿಂಗ್ ಮೂಲಕ ದೃಶ್ಯಾವಳಿಗಳನ್ನು ವೀಕ್ಷಿಸಲು ೧೨ ಅಧಿಕಾರಿಗಳ ತಂಡವನ್ನು ನೇಮಿಸಲಾಗಿದೆ.
ಪರೀಕ್ಷಾ ಅಕ್ರಮ ತಡೆಯಲು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಜಾಗೃತ ದಳಗಳನ್ನು ಹಾಗೂ ಇಬ್ಬರು ವಿಶೇಷ ಜಾಗೃತ ದಳದ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಶ್ನೆಪತ್ರಿಕೆಗಳನ್ನು ಸುರಕ್ಷಿತವಾಗಿ ತಲುಪಿಸಲು ೨೯ ಮಾರ್ಗಗಳನ್ನು ರಚಿಸಲಾಗಿದ್ದು, ’ಎಸ್ಕಾರ್ಟ್’ ವ್ಯವಸ್ಥೆಯನ್ನು ಬಳಸಲಾಗುತ್ತಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಸೌಲಭ್ಯ, ನಿರಂತರ ವಿದ್ಯುತ್ ಪೂರೈಕೆಗೆ ಬೆಸ್ಕಾಂ ಮತ್ತು ಆರೋಗ್ಯ ರಕ್ಷಣೆಗೆ ಆಶಾ ಕಾರ್ಯಕರ್ತೆಯರ ನಿಯೋಜನೆಗೆ ಸೂಚಿಸಲಾಗಿದೆ.
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರದ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ ೮:೦೦ ರಿಂದ ಮಧ್ಯಾಹ್ನ ೨:೦೦ ಗಂಟೆಯವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್, ಕಂಪ್ಯೂಟರ್ ಅಂಗಡಿ ಮತ್ತು ಟ್ಯೂಷನ್ ಕೇಂದ್ರಗಳನ್ನು ಮುಚ್ಚಲು ಆದೇಶಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕೆಂದು ವಿದ್ಯಾರ್ಥಿಗಳು ಕಿವಿ ಜಿಲ್ಲಾಧಿಕಾರಿಗಳು ನುಡಿದರು
ಪತ್ರಿಕಾಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕಿ ಅಲ್ಮಸ್ ಪರ್ವಿನ್ ತಾಜ್ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್