
ಗದಗ, 17 ಮಾರ್ಚ್ (ಹಿ.ಸ.)
ಆ್ಯಂಕರ್:- ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026 ರ ಮಾರ್ಚ, ಏಪ್ರಿಲ್ -2026 ರ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ- 1 ನ್ನು ಮಾರ್ಚ 18 ರಿಂದ ಏಪ್ರಿಲ್ 2 ರವರಗೆ ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1.15 ಗಂಟೆಯವರಗೆ ನಡೆಸಲಿದೆ.
ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವನ್ನಾಗಿ ಘೋಷಿಸಲಾಗಿದೆ. ಮಾರ್ಚ 18 ರಿಂದ ಏಪ್ರಿಲ್ 2 ರವರೆಗೆ ಬೆಳಿಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಪ್ರತಿಬಂಧಕಾಜ್ಞೆ ಜಾರಿ ಮಾಡಲಾಗಿದೆ.
ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅತವ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಬುಕ್ಸ್ಟಾಲ್ , ಫೋಟೋ ಕಾಪಿಯರ್ಗಳನ್ನು ಬಂದ ಮಾಡಲು ಆದೇಶಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಿದೆ.
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರಹೋಗುವ ಸಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು, ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳಲಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಅವಕಾಶವಿದು, ಉಳಿದ ಎಲ್ಲ ಪರೀಕ್ಷಾ ಸಿಬ್ಬಂದಿ , ವಿದ್ಯಾರ್ಥಿಗಳು ಮೊಬೈಲ್ ಫೋನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು, ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರತಿಬಂಧಿಸಿದ ಯಾವುದೇ ವಸ್ತುಗಳನ್ನು ಸಂಬಂಧಪಟ್ಟವರು ಪರೀಕ್ಷಾ ಕೇಂದ್ರದಡಿ ತೆಗೆದುಕೊಂಡು ಹೋಗಲು ನಿರ್ಬಂಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP