ಎಸ್ಎಸ್ಎಲ್ಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ
ಬಳ್ಳಾರಿ, 17 ಮಾರ್ಚ್ (ಹಿ.ಸ.) ಆ್ಯಂಕರ್: ಜಿಲ್ಲೆಯಾದ್ಯಂತ 65 ಕೇಂದ್ರಗಳಲ್ಲಿ ಮಾರ್ಚ್ 18 ರಿಂದ ಏಪ್ರಿಲ್ 02 ರವರಗೆ ಎಸ್ಎಸ್ಎಲ್ಸಿ ಪರಿಕ್ಷೆ -1 ನಡೆಯಲಿದೆ. ಪರೀಕ್ಷಾ ದಿನದಂದು ಅವ್ಯವಹಾರಗಳನ್ನು ತಡೆಗಟ್ಟಲ್ಲು ಹಾಗೂ ಪರೀಕ್ಷೆಯ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಶಾಂತಿ ಮತ್ತ
ಎಸ್ಎಸ್ಎಲ್ಸಿ ಪರಿಕ್ಷಾ : ನಿಷೇದ


ಬಳ್ಳಾರಿ, 17 ಮಾರ್ಚ್ (ಹಿ.ಸ.)

ಆ್ಯಂಕರ್: ಜಿಲ್ಲೆಯಾದ್ಯಂತ 65 ಕೇಂದ್ರಗಳಲ್ಲಿ ಮಾರ್ಚ್ 18 ರಿಂದ ಏಪ್ರಿಲ್ 02 ರವರಗೆ ಎಸ್ಎಸ್ಎಲ್ಸಿ ಪರಿಕ್ಷೆ -1 ನಡೆಯಲಿದೆ.

ಪರೀಕ್ಷಾ ದಿನದಂದು ಅವ್ಯವಹಾರಗಳನ್ನು ತಡೆಗಟ್ಟಲ್ಲು ಹಾಗೂ ಪರೀಕ್ಷೆಯ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೋಳ್ಳುವ ಹಿತದೃಷ್ಠಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023ರ ಕಲಂ 163ರ ಅಡಿ ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.

ಪರಿಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣದಲ್ಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್ನೆಟ್ ಸೆಂಟ್ರ್ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲಾಗಿದೆ. ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ ಎಂದು ಅವರು ಆದೇಶ ಹೊರಡಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande