
ಬಾಗಲಕೋಟೆ 17 ಮಾರ್ಚ್ (ಹಿ.ಸ.)
ಆ್ಯಂಕರ್ : ರಾಜ್ಯದಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಎದುರಿಸುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಪ್ರಕಟಣೆ ಮೂಲಕ
ಶುಭ ಹಾರೈಕೆಗಳನ್ನು ಸಲ್ಲಿಸಿದರು.
ಪರೀಕ್ಷೆ ಎಂದರೆ ಕೇವಲ ಅಂಕಗಳಿಕೆಯಲ್ಲ, ಅದು ವಿದ್ಯಾರ್ಥಿಗಳ ಜ್ಞಾನ ಪಯಣದ ಒಂದು ಭಾಗ ಮಾತ್ರ. ಆದ್ದರಿಂದ ವಿದ್ಯಾರ್ಥಿಗಳು ಧೈರ್ಯದಿಂದ ಮತ್ತು ನಿರಾಳ ಮನಸ್ಸಿನಿಂದ ಪರೀಕ್ಷೆ ಬರೆಯಬೇಕು ಎಂದು ತಿಳಿಸಿದರು.
ಪರೀಕ್ಷೆಯ ಬಗ್ಗೆ ಯಾವುದೇ ಆತಂಕ ಅಥವಾ ಭಯವಿಲ್ಲದೆ, ಆತ್ಮ ವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಬೇಕು. ತಮ್ಮ ಪರಿಶ್ರಮದ ಮೇಲೆ ನಂಬಿಕೆ ಇಟ್ಟು ಮುಂದುವರಿದರೆ ಉತ್ತಮ ಫಲಿತಾಂಶ ಸಾಧಿಸಲು ಸಾಧ್ಯವೆಂದು ಅಭಿಪ್ರಾಯ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿ, ಯಶಸ್ಸು ಅವರದಾಗಲಿ ಎಂದು ಅವರು ಹಾರೈಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande