ರಾಜ್ಯದಲ್ಲಿ ಒಣಹವೆ ನಡುವೆ ಕೆಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ
ಬೆಂಗಳೂರು, 17 ಮಾರ್ಚ್ (ಹಿ.ಸ.): ಆ್ಯಂಕರ್: ರಾಜ್ಯದಾದ್ಯಂತ ಇಂದು ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. ಮಧ್ಯಾಹ್ನ ನಂತರ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರ
ರಾಜ್ಯದಲ್ಲಿ ಒಣಹವೆ ನಡುವೆ ಕೆಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ


ಬೆಂಗಳೂರು, 17 ಮಾರ್ಚ್ (ಹಿ.ಸ.):

ಆ್ಯಂಕರ್:

ರಾಜ್ಯದಾದ್ಯಂತ ಇಂದು ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

ಮಧ್ಯಾಹ್ನ ನಂತರ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದ್ದು, ರಾಜ್ಯದ ಕೆಲವೆಡೆ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬಿಸಿಲಿನ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಸೂಚಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande