ಯುಎಇ ವಾಯುಪ್ರದೇಶ ಪುನರಾರಂಭ: ದುಬೈ ವಿಮಾನ ಸಂಚಾರ ಪುನರಾರಂಭ
ನವದೆಹಲಿ, 17 ಮಾರ್ಚ್ (ಹಿ.ಸ.): ಆ್ಯಂಕರ್: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡಿರುವ ಸಂಘರ್ಷದ ನಡುವೆ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಾಯುಪ್ರದೇಶವನ್ನು ಮತ್ತೆ ತೆರೆಯಲಾಗಿದೆ. ಮಂಗಳವಾರ ಮುಂಜಾನೆ ಭದ್ರತಾ ಕಾರಣಗಳಿಂದ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಸ್ಥ
Dhubai airport


ನವದೆಹಲಿ, 17 ಮಾರ್ಚ್ (ಹಿ.ಸ.):

ಆ್ಯಂಕರ್:

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡಿರುವ ಸಂಘರ್ಷದ ನಡುವೆ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಾಯುಪ್ರದೇಶವನ್ನು ಮತ್ತೆ ತೆರೆಯಲಾಗಿದೆ.

ಮಂಗಳವಾರ ಮುಂಜಾನೆ ಭದ್ರತಾ ಕಾರಣಗಳಿಂದ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಹಿಂತೆಗೆದು ವಿಮಾನ ಸಂಚಾರವನ್ನು ಪುನರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೇಲಿನ ನಿರ್ಬಂಧಗಳನ್ನು ಕೂಡ ತೆರವುಗೊಳಿಸಲಾಗಿದ್ದು, ವಿಮಾನಗಳ ಲ್ಯಾಂಡಿಂಗ್ ಮತ್ತು ಟೇಕ್‌ಆಫ್ ಕಾರ್ಯಾಚರಣೆಗಳು ಮತ್ತೆ ಆರಂಭಗೊಂಡಿವೆ.

ಸರ್ಕಾರಿ ಸುದ್ದಿ ಸಂಸ್ಥೆ WAM ವರದಿ ಪ್ರಕಾರ, ಯುಎಇ ನಾಗರಿಕ ವಿಮಾನಯಾನ ಪ್ರಾಧಿಕಾರವು “ಪ್ರಸ್ತುತ ಪರಿಸ್ಥಿತಿ ಸ್ಥಿರವಾಗಿದೆ” ಎಂದು ತಿಳಿಸಿದೆ.

ಸಂಘರ್ಷದ ಹಿನ್ನೆಲೆ ಇರಾನ್ ನಿಂದ ಡ್ರೋನ್‌ಗಳು ಮತ್ತು ಕ್ಷಿಪಣಿಗಳು ಹಾರಿಸಲ್ಪಡುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಯುಎಇ ಸೇನೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದೆ.

ಈ ಕಾರ್ಯಾಚರಣೆಗಳ ನಡುವೆ ದುಬೈನಲ್ಲಿ ಸ್ಫೋಟಗಳ ಶಬ್ದಗಳು ಕೇಳಿಬಂದ ಹಿನ್ನೆಲೆಯಲ್ಲಿ ಮುಂಜಾನೆ ವಾಯುಪ್ರದೇಶವನ್ನು ಮುಚ್ಚಲಾಗಿತ್ತು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande