ದಿವ್ಯಾಂಗರಿಗೆ ಸಹಾಯಕ ಸಾಧನ ವಿತರಣೆ
ಹುಬ್ಬಳ್ಳಿ, 17 ಮಾರ್ಚ್ (ಹಿ.ಸ.): ಆ್ಯಂಕರ್: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪ್ರಸ್ತಾವನೆಯ ಮೇರೆಗೆ ಇಂದು ಹುಬ್ಬಳ್ಳಿ ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿ ಪ್ರಧಾನಮಂತ್ರಿ ದಿವ್ಯಾಂಶ ಕೇಂದ್ರ ಹುಬ್ಬಳ್ಳಿ ಹಾಗೂ ಎಎಲ್ಐಎಂಸಿಓ ವತಿಯಿಂದ ನೀಡಲಾದ ದಿವ್ಯಾಂಗರಿಗೆ ಸಹಾಯಕ ಸಾಧನಗಳನ್ನು ಹುಬ್ಬಳ್ಳಿ ಧಾ
Distribution


ಹುಬ್ಬಳ್ಳಿ, 17 ಮಾರ್ಚ್ (ಹಿ.ಸ.):

ಆ್ಯಂಕರ್:

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪ್ರಸ್ತಾವನೆಯ ಮೇರೆಗೆ ಇಂದು ಹುಬ್ಬಳ್ಳಿ ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿ ಪ್ರಧಾನಮಂತ್ರಿ ದಿವ್ಯಾಂಶ ಕೇಂದ್ರ ಹುಬ್ಬಳ್ಳಿ ಹಾಗೂ ಎಎಲ್ಐಎಂಸಿಓ ವತಿಯಿಂದ ನೀಡಲಾದ ದಿವ್ಯಾಂಗರಿಗೆ ಸಹಾಯಕ ಸಾಧನಗಳನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರರಾದ ಜೋತಿ ಪಾಟೀಲ ಹಾಗೂ ಉಪ ಮಹಾಪೌರ ಸಂತೋಷ ಚವ್ಹಾಣ ವಿತರಿಸಿದರು‌.

ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 25 ಜನ ದಿವ್ಯಾಂಗರಿಗೆ ಹಾಗೂ ವಿಶೇಷ ಚೇತನರಿಗೆ ಬ್ಯಾಟರಿ ಚಾಲಿತ ಸೈಕಲ್‌ಗಳು ಸೇರಿದಂತೆ ವಿವಿಧ ಸಹಾಯಕ ಉಪಕರಣಗಳನ್ನು ವಿತರಿಸಲಾಯಿತು.

ಈ ಸಂದರ್ಭ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದಿವ್ಯಾಂಗರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಎಎಲ್ಐಎಂಸಿಓ ಸಂಸ್ಥೆಯ ಮೂಲಕ ಉಚಿತ ಸಹಾಯಕ ಸಾಧನಗಳ ವಿತರಣೆಯನ್ನು ನಿರಂತರವಾಗಿ ಮಾಡಲಾಗುತ್ತಿದೆ ಎಂದು ತಿಳಿಸಲಾಯಿತು. ಈ ಯೋಜನೆಗಳ ಮೂಲಕ ದಿವ್ಯಾಂಗರ ದಿನನಿತ್ಯದ ಅಗತ್ಯಗಳನ್ನು ಪೂರೈಸಲು ಸಹಾಯವಾಗುತ್ತಿದ್ದು, ಅವರ ಜೀವನಮಟ್ಟವನ್ನು ಸುಧಾರಿಸಲು ನೆರವಾಗುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande