
ಬೆಂಗಳೂರು, 18 ಮಾರ್ಚ್ (ಹಿ.ಸ.):
ಆ್ಯಂಕರ್:
ರಾಜ್ಯದಾದ್ಯಂತ ಇಂದು ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಬೆಳಿಗ್ಗೆ ಮತ್ತು ಮಧ್ಯಾಹ್ನ ವೇಳೆಯಲ್ಲಿ ಉಷ್ಣಾಂಶ ಹೆಚ್ಚಾಗಿ ಬಿಸಿಲಿನ ತಾಪಮಾನ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆದರೆ ಮಧ್ಯಾಹ್ನ ನಂತರ ರಾಜ್ಯದ ಕೆಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ. ಕೆಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ವಿಶೇಷವಾಗಿ ಒಳನಾಡು ಹಾಗೂ ಮಲೆನಾಡು ಪ್ರದೇಶಗಳಲ್ಲಿ ಸ್ಥಳೀಯ ಮಳೆಯ ಸಾಧ್ಯತೆ ಹೆಚ್ಚಾಗಿದ್ದು, ಗಾಳಿಯ ವೇಗವೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಸೂಚಿಸಿದೆ.
ರೈತರು ಬೆಳೆಗಳ ರಕ್ಷಣೆಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa