ನವೀಕೃತ ಉರ್ದು ಶಾಲೆ ಉದ್ಘಾಟನೆ
ಬೆಂಗಳೂರು, 18 ಮಾರ್ಚ್ (ಹಿ.ಸ.): ಆ್ಯಂಕರ್: ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬಿನ್ನಿಪೇಟೆ ವಾರ್ಡ್ ನ ಗೋಪಾಲಪುರದಲ್ಲಿ ನವೀಕರಿಸಿದ ನೂತನ ಸರ್ಕಾರಿ ಉರ್ದು ಶಾಲೆಯನ್ನು ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ವರಿಗೂ ಗುಣಮಟ್ಟದ ಶಿಕ್ಷಣ ನಮ್ಮ ಸ
Inauguration


ಬೆಂಗಳೂರು, 18 ಮಾರ್ಚ್ (ಹಿ.ಸ.):

ಆ್ಯಂಕರ್:

ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬಿನ್ನಿಪೇಟೆ ವಾರ್ಡ್ ನ ಗೋಪಾಲಪುರದಲ್ಲಿ ನವೀಕರಿಸಿದ ನೂತನ ಸರ್ಕಾರಿ ಉರ್ದು ಶಾಲೆಯನ್ನು ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ವರಿಗೂ ಗುಣಮಟ್ಟದ ಶಿಕ್ಷಣ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಮೂಲಸೌಕರ್ಯ ಹಾಗೂ ಆಧುನಿಕ ಕಲಿಕಾ ವಾತಾವರಣ ಒದಗಿಸುವುದು ನಮ್ಮ ಬದ್ಧತೆಯಾಗಿದೆ. ಚಿಣ್ಣರಿಗೆ ಸುಭದ್ರ ಭವಿಷ್ಯ ನಿರ್ಮಾಣಕ್ಕೆ ಈ ಶಾಲಾ ಕೇಂದ್ರ ಭದ್ರ ಅಡಿಪಾಯವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande