ಕಲ್ಯಾಣ ಕರ್ನಾಟಕ ವಿಮಾನ ನಿಲ್ದಾಣಗಳ ಕುರಿತು ಕೇಂದ್ರ ಸಚಿವರ ಜೊತೆ ಚರ್ಚೆ
ನವದೆಹಲಿ, 18 ಮಾರ್ಚ್ (ಹಿ.ಸ.): ಆ್ಯಂಕರ್: ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಚಿವ ಎನ್‌.ಎಸ್‌ ಭೋಸರಾಜು ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರನ್ನು ಭೇಟಿಯಾಗಿ, ರಾಜ್ಯದ ವಿಮಾನಯಾನ ವಲಯದ ಪ್ರಮುಖ ಬೆಳವಣಿಗೆಗಳ ಕುರಿತು ಚರ್ಚೆ ನ
Meet


ನವದೆಹಲಿ, 18 ಮಾರ್ಚ್ (ಹಿ.ಸ.):

ಆ್ಯಂಕರ್:

ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಚಿವ ಎನ್‌.ಎಸ್‌ ಭೋಸರಾಜು ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರನ್ನು ಭೇಟಿಯಾಗಿ, ರಾಜ್ಯದ ವಿಮಾನಯಾನ ವಲಯದ ಪ್ರಮುಖ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು.

ಪ್ರಮುಖವಾಗಿ ಕಲ್ಯಾಣ ಕರ್ನಾಟಕ ಭಾಗದ ಆರ್ಥಿಕ ಪ್ರಗತಿಗೆ ಮುನ್ನುಡಿ ಬರೆಯಲಿರುವ ರಾಯಚೂರು ವಿಮಾನ ನಿಲ್ದಾಣದ ಕಾಮಗಾರಿಗಳ ಬಗ್ಗೆ, ಕಲಬುರಗಿ ಉಡಾನ್‌ ಯೋಜನೆ ಅಡಿಯಲ್ಲಿ ವಿಮಾನಯಾನ ಮರುಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು. ಕಲಬುರಗಿ ವಿಮಾನಯಾನ ಮರು ಪ್ರಾರಂಭಿಸುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ಸಂಬಂಧಪಟ್ಟ ವಿಮಾನ ಸಂಸ್ಥೆಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ದೆಹಲಿಯಲ್ಲಿ ಕರ್ನಾಟಕ ಸರಕಾರದ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ಸಂಸದ ಕುಮಾರ ನಾಯಕ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿಗಳಾದ ಬಿ.ಕೆ. ಪವಿತ್ರ ಅವರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande