
ನವದೆಹಲಿ, 18 ಮಾರ್ಚ್ (ಹಿ.ಸ.):
ಆ್ಯಂಕರ್:ದೆಹಲಿಯ ಪಾಲಂ ಪ್ರದೇಶದಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದ ಕುರಿತು ಮುಖ್ಯಮಂತ್ರಿ ರೇಖಾ ಗುಪ್ತಾ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ ನೀಡಿದ್ದಾರೆ.
ಈ ದುರಂತದಲ್ಲಿ ಹಲವು ಮಕ್ಕಳನ್ನು ಒಳಗೊಂಡಂತೆ ಕನಿಷ್ಠ ಏಳು ಮಂದಿ ಸಾವನ್ನಪ್ಪಿರುವುದು ತಿಳಿದುಬಂದಿದ್ದು, ಘಟನೆಗೆ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಈ ದುರ್ಘಟನೆಯ ಸುದ್ದಿ ಮನಸ್ಸಿಗೆ ತುಂಬಾ ನೋವುಂಟುಮಾಡಿದೆ” ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಬರೆದಿದ್ದಾರೆ.
ಘಟನಾ ಸ್ಥಳದಲ್ಲಿ ದೆಹಲಿ ಅಗ್ನಿಶಾಮಕ ಸೇವೆ, ದೆಹಲಿ ಪೊಲೀಸರು ಹಾಗೂ ಜಿಲ್ಲಾಡಳಿತದ ತಂಡಗಳು ತುರ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಬೆಳಿಗ್ಗೆ ಸುಮಾರು 7 ಗಂಟೆಗೆ ಪಾಲಂ ಮೆಟ್ರೋ ನಿಲ್ದಾಣದ ಸಮೀಪದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಲಭಿಸಿದ್ದು, ತಕ್ಷಣವೇ ಸುಮಾರು 30 ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಲಾಗಿದೆ.
ಘಟನೆಯ ನಿಖರ ಕಾರಣ ಪತ್ತೆಹಚ್ಚಲು ಮ್ಯಾಜಿಸ್ಟೀರಿಯಲ್ ತನಿಖೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಈಗಾಗಲೇ ರಕ್ಷಣಾ ಮತ್ತು ಶಮನ ಕಾರ್ಯಗಳು ಮುಂದುವರಿದಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa