
ಬೆಂಗಳೂರು, 18 ಮಾರ್ಚ್ (ಹಿ.ಸ.):
ಆ್ಯಂಕರ್:
ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಬುಧವಾರದಿಂದ ರಾಜ್ಯದಾದ್ಯಂತ ಆರಂಭವಾಗಿವೆ. ಮಾ.18ರಿಂದ ಎ.2ರವರೆಗೆ ನಡೆಯಲಿರುವ ಈ ಪರೀಕ್ಷೆಯನ್ನು ಸೂಸೂತ್ರ ಹಾಗೂ ಪಾರದರ್ಶಕವಾಗಿ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಮಗ್ರ ಸಿದ್ಧತೆಗಳನ್ನು ಕೈಗೊಂಡಿದೆ.
ಈ ಬಾರಿ ಒಟ್ಟು 8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಮೊದಲ ದಿನದ ಪರೀಕ್ಷೆ ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿದೆ.
ಪರೀಕ್ಷೆ ಸುಗಮವಾಗಿ ನಡೆಯಲು ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು , ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಪೂರ್ವಸಭೆಗಳನ್ನು ನಡೆಸಿ ಅಂತಿಮ ತಯಾರಿಗಳನ್ನು ಪೂರ್ಣಗೊಳಿಸಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರದಲ್ಲೂ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಅಕ್ರಮ ತಡೆಗಟ್ಟಲು ಕಟ್ಟುನಿಟ್ಟಿನ ನಿಗಾವಹಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸುಳ್ಳು ಮಾಹಿತಿ ಹಬ್ಬಿಸುವವರು ಅಥವಾ ನಕಲಿ ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಪರೀಕ್ಷಾರ್ಥಿಗಳು ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವಂತೆ ಇಲಾಖೆ ಮನವಿ ಮಾಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa