
ನವದೆಹಲಿ, 18 ಮಾರ್ಚ್ (ಹಿ.ಸ.):
ಆ್ಯಂಕರ್:
ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಶೀಘ್ರ ಅಂತಿಮಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ದಾವಣಗೆರೆ ಟಿಕೆಟ್ ಗೊಂದಲ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಇನ್ನೂ ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ ಎಂದು ಹೇಳಿದರು. “ನಾನು ಹಾಗೂ ಮುಖ್ಯಮಂತ್ರಿ ಈ ವಿಚಾರವಾಗಿ ಚರ್ಚೆ ನಡೆಸಿದ್ದೇವೆ. ಆದರೆ ವರದಿ ಇನ್ನೂ ಬಂದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೇಟಿ ಅವರ ಕುಟುಂಬದವರನ್ನು ಕರೆಸಿ ಚರ್ಚೆ ಮಾಡಿದ್ದಾರೆ” ಎಂದು ತಿಳಿಸಿದರು.
ದಾವಣಗೆರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ನಿರಂತರವಾಗಿ ಭೇಟಿ ಮಾಡುತ್ತಿದ್ದು, ನಿನ್ನೆ ಆ ಭಾಗದ ಸಂಸದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚೆ ನಡೆಸಲಾಗಿದೆ. ಈ ಸಂಬಂಧ ಹೈಕಮಾಂಡ್ ನಾಯಕರಿಗೆ ವರದಿ ಸಲ್ಲಿಸಲಾಗುವುದು ಎಂದರು.
ಅಂತಿಮ ತೀರ್ಮಾನ ಹೈಕಮಾಂಡ್ ಕೈಗೊಳ್ಳಲಿದ್ದು, ಅಭ್ಯರ್ಥಿಗಳ ಹೆಸರುಗಳನ್ನು ಇನ್ನೂ ಎರಡು ರಿಂದ ಮೂರು ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa