ಕೇಂದ್ರಕ್ಕೆ ಸಲ್ಲಿಸಿರುವ ಯೋಜನೆಗಳ ಅನುಮೋದನೆಗೆ ಸಕಾರಾತ್ಮಕ ಸ್ಪಂದನೆ ಸಚಿವ ಭೋಸರಾಜು
ನವದೆಹಲಿ, 18 ಮಾರ್ಚ್ (ಹಿ.ಸ.): ಆ್ಯಂಕರ್: ಪಿಎಂಕೆಎಸ್ ವಾಯ ಹಾಗೂ ಆರ್ ಆರ್ ಆರ್ ಯೋಜನೆಗಳ ಅಡಿಯಲ್ಲಿ ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ಸಲ್ಲಿಸಿರುವ 𝟯𝟬𝟱𝟮 ಕೋಟಿ ಮೊತ್ತದ ಪ್ರಸ್ತಾವನೆಗಳಿಗೆ ಶೀಘ್ರ ಅನುಮೋದನೆ ದೊರಕಿಸಿಕೊಡುವಂತೆ ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರಿಗೆ ಮ
Meet


ನವದೆಹಲಿ, 18 ಮಾರ್ಚ್ (ಹಿ.ಸ.):

ಆ್ಯಂಕರ್:

ಪಿಎಂಕೆಎಸ್ ವಾಯ ಹಾಗೂ ಆರ್ ಆರ್ ಆರ್ ಯೋಜನೆಗಳ ಅಡಿಯಲ್ಲಿ ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ಸಲ್ಲಿಸಿರುವ 𝟯𝟬𝟱𝟮 ಕೋಟಿ ಮೊತ್ತದ ಪ್ರಸ್ತಾವನೆಗಳಿಗೆ ಶೀಘ್ರ ಅನುಮೋದನೆ ದೊರಕಿಸಿಕೊಡುವಂತೆ ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ತಿಳಿಸಿದ್ದಾರೆ.

ಇಂದು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರನ್ನು ಭೇಟಿಯಾಗಿ ಅವರು ಮಹತ್ವದ ಮಾತುಕತೆ ನಡೆಸಿದರು.

ಕೇಂದ್ರ ಸರ್ಕಾರದ ಪಿಎಂಕೆಎಸ್ ವಾಯ ಹಾಗೂ ಆರ್ ಆರ್ ಆರ್ ಯೋಜನೆಗಳ ಅಡಿಯಲ್ಲಿ ರಾಜ್ಯ ಸರ್ಕಾರದಿಂದ ಸುಮಾರು 𝟯𝟬𝟱𝟮 ಕೋಟಿ ಮೊತ್ತದ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ಶೇ. 𝟲𝟬 ರಷ್ಟು ಹಾಗೂ ರಾಜ್ಯ ಸರ್ಕಾರ ಶೇ. 𝟰𝟬 ರಷ್ಟು ಅನುದಾನ ಒದಗಿಸಬೇಕಿದೆ.

ಈಗಾಗಲೇ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪ್ರಸಕ್ತ ಆಯವ್ಯಯದಲ್ಲಿ ರಾಜ್ಯದ ಪಾಲಿನ ಶೇ. 𝟰𝟬 ರಷ್ಟು ಅನುದಾನವನ್ನು ಮೀಸಲಿಟ್ಟಿದ್ದಾರೆ. ಆದರೆ, ಈ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಲ್ಲಿಸಲಾಗಿರುವ ಪ್ರಸ್ತಾವನೆಗಳು ಕೇಂದ್ರ ಜಲಶಕ್ತಿ ಮಂತ್ರಾಲಯದ ವಿವಿಧ ಹಂತಗಳಲ್ಲಿ ಬಾಕಿಯಿವೆ. ಇವುಗಳಿಗೆ ಶೀಘ್ರವೇ ಅಗತ್ಯ ಅನುಮೋದನೆ ದೊರಕಿಸಿಕೊಡುವಂತೆ ಮನವಿ ಮಾಡಿದ್ದೇವೆ. ಇದಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande