ರಾಗಿ ಖರೀದಿ ಕೇಂದ್ರದ ಅವಧಿ ವಿಸ್ತರಣೆ
ಹಾಸನ, 19 ಮಾರ್ಚ್ (ಹಿ.ಸ.): ಆ್ಯಂಕರ್: 2025-26 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಹಾಸನ ಜಿಲ್ಲೆಯ ರೈತರಿಂದ ರಾಗಿ ಖರೀದಿಗಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಸಂಸ್ಥೆಯನ್ನು ಖರೀದಿ ಏಜೆನ್ಸಿಯಾಗಿ ಸರ್ಕಾರದಿಂದ ಆದೇಶವಾಗಿರುತ್ತದೆ. ಸರ್ಕಾರದ ಆದೇಶದನ್ವಯ 31.0
ರಾಗಿ ಖರೀದಿ ಕೇಂದ್ರದ ಅವಧಿ ವಿಸ್ತರಣೆ


ಹಾಸನ, 19 ಮಾರ್ಚ್ (ಹಿ.ಸ.):

ಆ್ಯಂಕರ್:

2025-26 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಹಾಸನ ಜಿಲ್ಲೆಯ ರೈತರಿಂದ ರಾಗಿ ಖರೀದಿಗಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಸಂಸ್ಥೆಯನ್ನು ಖರೀದಿ ಏಜೆನ್ಸಿಯಾಗಿ ಸರ್ಕಾರದಿಂದ ಆದೇಶವಾಗಿರುತ್ತದೆ. ಸರ್ಕಾರದ ಆದೇಶದನ್ವಯ 31.03.2026 ರಾಗಿ ಖರೀದಿಗೆ ಕೊನೆಯ ದಿನಾಂಕವಾಗಿರುತ್ತದೆ. ರೈತರಿಗೆ ಅನುಕೂಲವಾಗುವಂತೆ ರಾಗಿ ಖರೀದಿ ಕೇಂದ್ರಗಳ ಕಾರ್ಯಾವಧಿಯನ್ನು ವಿಸ್ತರಿಸಲಾಗಿದೆ. ಆದ್ದರಿಂದ, ರಾಗಿ ಖರೀದಿ ನಡೆಯುತ್ತಿರುವ ಜಿಲ್ಲೆಯ ಎಲ್ಲಾ 24 ಖರೀದಿ ಕೇಂದ್ರಗಳನ್ನು ಪ್ರತಿದಿನ ಬೆಳಿಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕಾರ್ಯನಿರ್ವಹಿಸುವಂತೆ ವ್ಯವಸ್ಥೆ ಮಾಡಲಾಗಿದೆ. ಸರ್ಕಾರಿ ರಜೆಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ರೈತರಿಂದ ರಾಗಿ ಖರೀದಿ ಮಾಡಲಾಗುವುದು ಎಂದು ಈ ಮೂಲಕ ತಿಳಿಸಿದೆ. ಈ ಯೋಜನೆಯ ಸದುಪಯೋಗವನ್ನು ರೈತರು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande