
ಹಾಸನ, 19 ಮಾರ್ಚ್ (ಹಿ.ಸ.):
ಆ್ಯಂಕರ್:
ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ನಾಗರಿಕ್ ಎಂಪವರ್ ಮೆಂಟ್ ಸಲ್ಯೂಸನ್ ಲಿಮಿಟೆಡ್ ಹಾಗೂ ಸಮೃದ್ದಿಸಿರಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ನೀಡುವ ಸಂಬಂಧ ಮಾ. 24 ರಂದು ಬೆಳಿಗ್ಗೆ 10.30 ಗಂಟೆಗೆ ನೇರ ಸಂದರ್ಶನ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ, ಯಾವುದೇ ಪದವಿ ಪಾಸಾದ ಪುರುಷ/ಮಹಿಳಾ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಸಂದರ್ಶನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸರ್ಕಾರಿ ಐ.ಟಿ.ಐ. ಕಾಲೇಜು ಆವರಣ ನಡೆಯಲಿದೆ, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08172-296374 ಸಂಪರ್ಕಿಸಹುದಾಗಿದೆ ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa