
ಬೆಂಗಳೂರು, 19 ಮಾರ್ಚ್ (ಹಿ.ಸ.):
ಆ್ಯಂಕರ್:
ನಾಡಿನೆಲ್ಲೆಡೆ ಯುಗಾದಿ ಹಬ್ಬ ಸಂಭ್ರಮ ಮನೆ ಮಾಡಿದೆ. ಹಬ್ಬದ ಹಿನ್ನೆಲೆಯಲ್ಲಿ, ರಾಜ್ಯದ ಪ್ರಮುಖ ನಗರಗಳ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ತಾರಕಕ್ಕೇರಿದೆ.
ಹಬ್ಬದ ಅಂಗವಾಗಿ ಬೆಂಗಳೂರಿನ ಕೆ.ಆರ್ ಮಾರ್ಕೆಟ್‌ನಲ್ಲಿ ಬೆಳಗ್ಗಿನಿಂದಲೇ ವ್ಯಾಪಾರ ಜೋರಾಗಿ ನಡೆಯುತ್ತಿದ್ದು, ಬೆಂಗಳೂರು ಸುತ್ತಮುತ್ತಲಿನ ಹೂವಿನ ಬೆಳೆಗಾರರು ನೇರವಾಗಿ ಮಾರುಕಟ್ಟೆಗೆ ಬಂದು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದಾರೆ.
ಸಾವಿರಾರು ಸಂಖ್ಯೆಯಲ್ಲಿ ಜನರು ಮಾರುಕಟ್ಟೆಗೆ ಆಗಮಿಸಿ ಹೂವು, ಹಣ್ಣು, ಮಾವಿನ ಸೊಪ್ಪು, ಬೇವಿನ ಸೊಪ್ಪು ಖರೀದಿಸಲು ಮುಗಿಬಿದ್ದ ದೃಶ್ಯ ಕಂಡುಬಂದಿದೆ. ವಿಶೇಷವಾಗಿ ಯುಗಾದಿ ಆಚರಣೆಗೆ ಅಗತ್ಯವಾದ ಸಾಮಗ್ರಿಗಳಿಗಾಗಿ ಬೇಡಿಕೆ ಹೆಚ್ಚಿದ ಪರಿಣಾಮ, ಹೂವು ಮತ್ತು ಹಣ್ಣುಗಳ ಬೆಲೆಯಲ್ಲಿ ಸ್ವಲ್ಪ ಏರಿಕೆ ಕಂಡುಬಂದಿದೆ.
ಅದೇ ರೀತಿ ರಾಜ್ಯದ ಪ್ರಮುಖ ನಗರಗಳಾದ ಹುಬ್ಬಳ್ಳಿ, ದಾವಣಗೆರೆ, ಬೆಳಗಾವಿ, ಮೈಸೂರಿನಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa