
ವಿಜಯಪುರ, 20 ಮಾರ್ಚ್ (ಹಿ.ಸ.)
ಆ್ಯಂಕರ್ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಮುದಾಯ ಪೊಲೀಸ್ ಯೋಜನೆಯಾದ ‘ಆಸರೆ’ ಅಡಿಯಲ್ಲಿ ವಿಜಯಪುರ ಜಿಲ್ಲೆಯ ಆಲಮೇಲ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಗುರುವಾರ ಠಾಣಾ ವ್ಯಾಪ್ತಿಯ ದೇವನಗಾಂವ ಮತ್ತು ಬ್ಯಾಡಗಿಹಾಳ ಗ್ರಾಮಗಳಿಗೆ ಭೇಟಿ ನೀಡಿ ಒಂಟಿ ಹಿರಿಯ ನಾಗರಿಕರು ಹಾಗೂ ಹಿರಿಯ ನಾಗರಿಕ ದಂಪತಿಗಳೊಂದಿಗೆ ಸಂವಾದ ನಡೆಸಿದರು.
ಹಿರಿಯ ನಾಗರಿಕರಿಗಾಗಿ ಸುರಕ್ಷತೆ, ಗೌರವ ಮತ್ತು ಆರೈಕೆ ಒದಗಿಸುವ ಉದ್ದೇಶದಿಂದ ಕೈಗೊಳ್ಳಲಾದ ಈ ಕಾರ್ಯಕ್ರಮದಲ್ಲಿ ಪೊಲೀಸರು ಮನೆಮನೆಗೆ ಭೇಟಿ ನೀಡಿ ಅವರ ಕುಂದುಕೊರತೆಗಳನ್ನು ಆಲಿಸಿದರು.
ಅಲ್ಲದೆ, ಹಿರಿಯ ನಾಗರಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಅವುಗಳನ್ನು ಸಾಧ್ಯವಾದಷ್ಟು ಬೇಗ ಬಗೆಹರಿಸುವ ಭರವಸೆ ನೀಡಿದರು.
‘ಆಸರೆ’ ಯೋಜನೆಯ ಮೂಲಕ ಹಿರಿಯ ನಾಗರಿಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದು, ಭದ್ರತಾ ಭಾವನೆ ಮೂಡಿಸುವುದು ಹಾಗೂ ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರ ಮಧ್ಯೆ ನಂಬಿಕೆ ವೃದ್ಧಿಸುವುದು ಮುಖ್ಯ ಉದ್ದೇಶವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande