ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ
ಬಾಗಲಕೋಟೆ, 20 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಅವರು ಪತ್ನಿ ರಾಜೇಶ್ವರಿ ಹಾಗೂ ಮುಖಂಡರೊಂದಿಗೆ ಇಂದು ಜಿಲ್ಲಾ ಚುನಾವಣಾಧಿಕಾರಿ ಸಂತೋಷ ಜಗಲಾಸರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಇದೇ ತಿಂಗಳ 23 ಸೋಮವಾರದಂದು ಸ್ಥಳೀಯ ಮುಖಂಡ
ನಾಮಪತ್ತ


ಬಾಗಲಕೋಟೆ, 20 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಅವರು ಪತ್ನಿ ರಾಜೇಶ್ವರಿ ಹಾಗೂ ಮುಖಂಡರೊಂದಿಗೆ ಇಂದು ಜಿಲ್ಲಾ ಚುನಾವಣಾಧಿಕಾರಿ ಸಂತೋಷ ಜಗಲಾಸರ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಇದೇ ತಿಂಗಳ 23 ಸೋಮವಾರದಂದು ಸ್ಥಳೀಯ ಮುಖಂಡರು , ರಾಜ್ಯ ಮತ್ತು ಜಿಲ್ಲಾ ಮಟ್ಟದ ನಾಯಕರ ಸಮ್ಮುಖದಲ್ಲಿ ಸಹಸ್ರಾರು ಕಾರ್ಯಕರ್ತರೊಂದಿಗೆ ಭವ್ಯ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಬಾಗಲಕೋಟೆ ನಗರದಲ್ಲಿ ನಡೆಯಲಿರುವ ಈ ಮೆರವಣಿಗೆಯಲ್ಲಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದು, ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ಸಕಲ ಸಿದ್ಧತೆಗಳು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮವು ಕ್ಷೇತ್ರದ ರಾಜಕೀಯ ಚಟುವಟಿಕೆಗಳಿಗೆ ಇನ್ನಷ್ಟು ಚೈತನ್ಯ ತುಂಬಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಪಕ್ಷದ ಮುಖಂಡರು ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande