ನೀರಾನೆ ದಾಳಿ ಪ್ರಕರಣ: ಸಚಿವ ಈಶ್ವರ ಖಂಡ್ರೆ ಸಂತಾಪ, ತನಿಖೆಗೆ ಆದೇಶ
ಬೆಂಗಳೂರು, 20 ಮಾರ್ಚ್ (ಹಿ.ಸ.): ಆ್ಯಂಕರ್: ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ನೀರಾನೆ ದಾಳಿಯಿಂದ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವಿಗೀಡಾದ ಘಟನೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಇದು ಅತ್ಯಂತ ದುರದೃಷ್ಟಕರ ಘಟನೆ ಎಂ
ನೀರಾನೆ ದಾಳಿ ಪ್ರಕರಣ: ಸಚಿವ ಈಶ್ವರ ಖಂಡ್ರೆ ಸಂತಾಪ, ತನಿಖೆಗೆ ಆದೇಶ


ಬೆಂಗಳೂರು, 20 ಮಾರ್ಚ್ (ಹಿ.ಸ.):

ಆ್ಯಂಕರ್:

ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ನೀರಾನೆ ದಾಳಿಯಿಂದ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವಿಗೀಡಾದ ಘಟನೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ.

ಇದು ಅತ್ಯಂತ ದುರದೃಷ್ಟಕರ ಘಟನೆ ಎಂದು ಶೋಕ ವ್ಯಕ್ತಪಡಿಸಿದ ಸಚಿವರು, ಈ ದುಃಖದ ಸಂದರ್ಭದಲ್ಲಿ ಮೃತ ವೈದ್ಯೆಯ ಕುಟುಂಬದೊಂದಿಗೆ ಸರ್ಕಾರ ನಿಲ್ಲುತ್ತದೆ ಎಂದು ತಿಳಿಸಿದ್ದಾರೆ. ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಮೃತ ವೈದ್ಯೆಯ ಕುಟುಂಬಕ್ಕೆ ನಿಯಮಾನುಸಾರ ತಕ್ಷಣ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ರಾಜ್ಯದ ಎಲ್ಲಾ ಮೃಗಾಲಯಗಳಲ್ಲಿ ಪಶುವೈದ್ಯರು ವನ್ಯಜೀವಿಗಳಿಗೆ ಚಿಕಿತ್ಸೆ ನೀಡುವ ವೇಳೆ ಪ್ರಮಾಣಿತ ಕಾರ್ಯವಿಧಾನ (ಎಸ್‌ಒಪಿ) ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ನಿರ್ದೇಶಿಸಿದ್ದಾರೆ.

ತನಿಖೆಗೆ ಆದೇಶ

ಈ ದುರಂತದ ಬಗ್ಗೆ ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳನ್ನು ಒಳಗೊಂಡ ತಂಡದಿಂದ ತನಿಖೆ ನಡೆಸಲು ಸೂಚನೆ ನೀಡಲಾಗಿದೆ. ಘಟನೆ ಕುರಿತು 7 ದಿನಗಳೊಳಗಾಗಿ ಸಮಗ್ರ ವರದಿ ಸಲ್ಲಿಸುವಂತೆ ಸಚಿವರು ಆದೇಶಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande