ಜಿಬಿಎ ಬಜೆಟ್ ಸಿದ್ಧತೆ: ವಿಧಾನಸೌಧದಲ್ಲಿ ಡಿಕೆಶಿ ಪೂರ್ವಭಾವಿ ಸಭೆ
ಬೆಂಗಳೂರು, 20 ಮಾರ್ಚ್ (ಹಿ.ಸ.): ಆ್ಯಂಕರ್: ಜಿಬಿಎ-5 ವ್ಯಾಪ್ತಿಯ ನಗರ ಪಾಲಿಕೆಗಳ 2026-27ನೇ ಸಾಲಿನ ಆಯವ್ಯಯ ಸಿದ್ಧತೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಮಹತ್ವದ ಪೂರ್ವಭಾವಿ ಸಭೆ ನಡೆಯಿತು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಸಂಬಂಧಿತ ಇಲಾಖೆಗಳ ಅಧಿಕ
Meeting


ಬೆಂಗಳೂರು, 20 ಮಾರ್ಚ್ (ಹಿ.ಸ.):

ಆ್ಯಂಕರ್:

ಜಿಬಿಎ-5 ವ್ಯಾಪ್ತಿಯ ನಗರ ಪಾಲಿಕೆಗಳ 2026-27ನೇ ಸಾಲಿನ ಆಯವ್ಯಯ ಸಿದ್ಧತೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಮಹತ್ವದ ಪೂರ್ವಭಾವಿ ಸಭೆ ನಡೆಯಿತು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಹಾಗೂ ಬೆಂಗಳೂರಿನ ಶಾಸಕರು ಭಾಗವಹಿಸಿದರು.

ಸಭೆಯಲ್ಲಿ ನಗರ ಪಾಲಿಕೆಗಳ ಆರ್ಥಿಕ ಸ್ಥಿತಿ, ಆದಾಯ ವೃದ್ಧಿ ಮಾರ್ಗಗಳು, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರಾಥಮಿಕ ಅಗತ್ಯಗಳಿಗೆ ಅನುದಾನ ಹಂಚಿಕೆ ಕುರಿತು ಚರ್ಚೆ ನಡೆಯಿತು. ಬಜೆಟ್ ತಯಾರಿಕೆಯಲ್ಲಿ ಜನಪರ ಯೋಜನೆಗಳಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ನಗರಾಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ಯೋಜನೆಗಳನ್ನು ವೇಗವಾಗಿ ಅನುಷ್ಠಾನಗೊಳಿಸುವುದು ಹಾಗೂ ನಗರ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸುವ ಬಗ್ಗೆ ವಿಶೇಷವಾಗಿ ಚರ್ಚಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande